Land Purchase Subsidy Scheme Application Form 2025-26
ಪ್ರಸಕ್ತ ಸಾಲಿಗೆ “ಭೂ ಒಡೆತನ ಯೋಜನೆ”ಯಡಿ ಭೂ ರಹಿತ ಪ.ಪಂಗಡ ವರ್ಗದವರಿಗೆ ಭೂಮಿ ಖರೀದಿಸಲು ಸಹಾಯಧನ, ಸಾಲ ಸೌಲಭ್ಯ ನೀಡಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಂತ ಕೃಷಿ ಭೂಮಿಯನ್ನು ಹೊಂದುವುದು ಎಷ್ಟೋ ಬಡ ವರ್ಗದ ಜನರ ಕನಸಾಗಿರುತ್ತದೆ. ಅಂತಹ ಅಶಕ್ತ ಬಡವರ್ಗದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಸರ್ಕಾರ ಭೂ ಒಡೆತನ ಯೋಜನೆಯನ್ನು ಜಾರಿಗೆ ತಂದಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ನ ಮೂಲಕ ಸೆಪ್ಟೆಂಬರ್ 17 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರವು ಭೂ ಒಡೆತನ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳಾ ಅಭ್ಯರ್ಥಿಗಳಿಗೆ ಘಟಕ ವೆಚ್ಚದ 20 ಅಥವಾ 25 ಲಕ್ಷ ರೂ.ಗಳ ದರದಲ್ಲಿ ಜಮೀನನ್ನು ಕೃಷಿ ಉದ್ದೇಶಕ್ಕೆ ಖರೀದಿಸಿ ಕೊಡಲಾಗುತ್ತದೆ. ಇದರಲ್ಲಿ ಫಲಾನುಭವಿಗೆ ಶೇ.50% ಸಹಾಯಧನ ಹಾಗೂ ಶೇ.50% ಸಾಲವನ್ನು (ಶೇ.4ರಷ್ಟು ಬಡ್ಡಿ) ದರದಲ್ಲಿ ನೀಡಲಾಗುತ್ತದೆ.
• ಫಲಾನುಭವಿಗಳು ಸಾಲದ ಹಣವನ್ನು ಬಡ್ಡಿ ಸಮೇತವಾಗಿ ಹತ್ತು ವರ್ಷಗಳಲ್ಲಿ ಪ್ರತಿ 6 ತಿಂಗಳಿಗೊಮ್ಮೆ 20 ಸಮಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
• ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.
• ಜಮೀನನ್ನು ಮಾರಾಟ ಮಾಡುವವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರಬಾರದು.
ವಯೋಮಿತಿ:
ಕನಿಷ್ಠ ಮಿತಿ – 21 ವರ್ಷಗಳು
ಗರಿಷ್ಠ ಮಿತಿ- 60 ವರ್ಷಗಳು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು
ಭಾವಚಿತ್ರ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಕುಟುಂಬದ ವಾರ್ಷಿಕ ಆದಾಯ ಪತ್ರ ಕುಟುಂಬದ ಪಡಿತರ ಚೀಟಿ ಮತದಾರರ ಗುರುತಿನ ಚೀಟಿ/ಆಧಾರ ಕಾರ್ಡ್ ಯೋಜನಾ ವರದಿ/ದರ ಪಟ್ಟಿ ಭೂರಹಿತ ಕೃಷಿ ಕಾರ್ಮಿಕರ ಪ್ರಮಾಣ ಪತ್ರ
ಅರ್ಜಿ ಶುಲ್ಕ:
ಉಲ್ಲೇಖಿಸಲಗಿರುವುದಿಲ್ಲ
ಫಲಾಪೇಕ್ಷಿಗಳ ಗಮನಕ್ಕೆ;
• ಫಲಾನುಭವಿಯು ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ 10 ಕಿ.ಮೀ ವ್ಯಾಪ್ತಿಯೊಳಗೆ ಜಮೀನನ್ನು ಫಲಾನುಭವಿಗೆ ಖರೀದಿಸಿ ಕೊಡಲಾಗುವುದು.
• ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ದರ ನಿಗದಿಪಡಿಸುತ್ತದೆ.
• ಈ ಯೋಜನೆಯಡಿ ಫಲಾಪೇಕ್ಷಿಗಳಿಗೆ ಸೌಲಭ್ಯ ಕಲ್ಪಿಸಲು ವಿಧಾನಸಭಾ ಕ್ಷೇತ್ರವಾರು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಆಧಾರದ ಮೇಲೆ ಮತ್ತು ಹಿಂದಿನ ವರ್ಷಗಳಲ್ಲಿ ಹೆಚ್ಚಿನ ಪ್ರಸ್ತಾವನೆಗಳು ಬಂದಿರುವ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾವಾರು ಗುರಿಯನ್ನು ನಿಗದಿಪಡಿಸಲಾಗುತ್ತದೆ.
How to Apply for Karnataka Land Purchase Subsidy Scheme 2025-26
ಅರ್ಜಿ ಸಲ್ಲಿಸುವ ವಿಧಾನ;
• ಅರ್ಜಿದಾರರು ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.
• ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/Sevasindhu/Kannada?ReturnUrl=%2Fನ ಮೂಲಕ ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
ST Land Purchase Subsidy Scheme 2025 Online Form Link