LIC AAO Generalist 2025: ವಿಮಾ ಕಂಪನಿಯಲ್ಲಿ ಆಡಳಿತಾಧಿಕಾರಿಗಳ ಭರ್ತಿ, ಅರ್ಜಿ ಆಹ್ವಾನ

ಜೀವ ವಿಮಾ ಕಂಪನಿಯಲ್ಲಿ ಉದ್ಯೋಗಾವಕಾಶ! ಒಟ್ಟು 350 ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳ ಅಧಿಸೂಚನೆ ಬಿಡುಗಡೆಯಗಿದ್ದು, ಅರ್ಜಿ ಸಲ್ಲಿಕೆಯ ಮಾನದಂಡಗಳೇನು?, ಮುಖ್ಯ ದಿನಾಂಕಗಳೇನು?, ಅರ್ಜಿ ಸಲ್ಲಿಕೆ ಹೇಗೆ? ವಿವರವಾದ ಮಾಹಿತಿ ಇಲ್ಲಿದೆ.

Published on:

ಭಾರತೀಯ ಜೀವ ವಿಮಾ ನಿಗಮ(LIC)ದಲ್ಲಿ ಸಹಾಯಕ ಆಡಳಿತ ಅಧಿಕಾರಿ(AAO-ಜನರಲಿಸ್ಟ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 350 ಸಹಾಯಕ ಆಡಳಿತಾಧಿಕಾರಿ (ಜನರಲಿಸ್ಟ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ಸೈಟ್ https://ibpsonline.ibps.in/licjul25/ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 16, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಸೆಪ್ಟೆಂಬರ್ 08, 2025

ಶೈಕ್ಷಣಿಕ ಅರ್ಹತೆ:

ಎಲ್ಐಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

01-08-2025 ರಂತೆ;

  • ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

ಹಂತ I→ ಪೂರ್ವಭಾವಿ ಪರೀಕ್ಷೆ
ಹಂತ-II→ ಮುಖ್ಯ ಪರೀಕ್ಷೆ
ಹಂತ-III→ ಸಂದರ್ಶನ, ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ, SC/ST/OBC/PwBD ಅಭ್ಯರ್ಥಿಗಳಿಗೆ ಪೂರ್ವ-ಪರೀಕ್ಷಾ ತರಬೇತಿ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 88,635ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 700ರೂ.
  • ಪ.ಜಾತಿ, ಪ.ಪಂಗಡ, ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 85ರೂ.

How to Apply for LIC AAO Generalist Recruitment 2025

ಅರ್ಜಿ‌ ಸಲ್ಲಿಸುವ ವಿಧಾನ;

  1. IBPS ಅಧಿಕೃತ ವೆಬ್ಸೈಟ್ https://ibpsonline.ibps.in/licjul25/ಗೆ ಭೇಟಿ ನೀಡಿ.
  2. ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
  3. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  4. ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  5. ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

LIC AAO Generalist Notification 2025 PDFDownload
Online Application Form LinkApply Now
Official Websitelicindia.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

5 thoughts on “LIC AAO Generalist 2025: ವಿಮಾ ಕಂಪನಿಯಲ್ಲಿ ಆಡಳಿತಾಧಿಕಾರಿಗಳ ಭರ್ತಿ, ಅರ್ಜಿ ಆಹ್ವಾನ”

Leave a Comment