LIC HFL Junior Assistant Recruitment 2024: ಭಾರತೀಯ ಜೀವ ವಿಮಾ ನಿಗಮ (LIC) ದೇಶದಾದ್ಯಂತ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಈ ನೇಮಕಾತಿಯಲ್ಲಿ ದೇಶದ ವಿವಿಧ ರಾಜ್ಯದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 200 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು LIC ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಪದವಿ ಪಡೆದುಕೊಂಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆನ್ ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
LIC HFL ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು www.lichousing.com ವೆಬ್ ಸೈಟ್ ಗೆ ಭೇಟಿ ನೀಡಿ ಆಗಸ್ಟ್ 14ರ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ LIC HFL ಅಸಿಸ್ಟೆಂಟ್ ನೇಮಕಾತಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of LIC HFL Junior Assistant Notification 2024
Organization – LIC Housing Finance Ltd Post Name – Junior Assistant Total Posts – 200 Job Location – All Over India(Karnataka)
ನೇಮಕಾತಿಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 25 , 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 14, 2024
ನೇಮಕಾತಿ ಪರೀಕ್ಷೆಯ ದಿನಾಂಕ – ಸೆಪ್ಟೆಂಬರ್ 2024
ರಾಜ್ಯವಾರು ಖಾಲಿ ಇರುವ ಹುದ್ದೆಗಳ ವಿವರ:
ಆಂಧ್ರಪ್ರದೇಶ -12
ಅಸ್ಸಾಂ – 05
ಛತ್ತೀಸ್‌ಗಢ – 06
ಗುಜರಾತ್ – 05
ಹಿಮಾಚಲ ಪ್ರದೇಶ – 03
ಜಮ್ಮು ಮತ್ತು ಕಾಶ್ಮೀರ – 01
ಕರ್ನಾಟಕ – 38
ಮಧ್ಯಪ್ರದೇಶ – 12
ಮಹಾರಾಷ್ಟ್ರ- 53
ಪುದುಚೇರಿ – 01
ಸಿಕ್ಕಿಂ – 01
ತಮಿಳುನಾಡು – 10
ತೆಲಂಗಾಣ – 31
ಉತ್ತರ ಪ್ರದೇಶ – 17
ಪಶ್ಚಿಮ ಬಂಗಾಳ – 05
ಒಟ್ಟು 200 ಹುದ್ದೆಗಳಿಗೆ ದೇಶದ ಈ ಮೇಲಿನ ರಾಜ್ಯಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದುಕೊಂಡಿರಬೇಕು.
ಕಂಪ್ಯೂಟರ್ ಜ್ಞಾನ ಬಗ್ಗೆ ಕಡ್ಡಾಯವಾಗಿ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 21ರಿಂದ ಗರಿಷ್ಠ 28 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ:
Gen/ OBC/ EWS/ ವರ್ಗದ ಅಭ್ಯರ್ಥಿಗಳಿಗೆ: ₹ 800/-
SC/ ST/ ಸ್ತ್ರೀ/ವರ್ಗದ ಅಭ್ಯರ್ಥಿಗಳಿಗೆ: ₹ 800/-
ಪಾವತಿ ಮೋಡ್: ಆನ್‌ಲೈನ್ ಮೋಡ್
ಆಯ್ಕೆ ಪ್ರಕ್ರಿಯೆ:
ಪ್ರಾಥಮಿಕ ಪರೀಕ್ಷೆ: ಆನ್‌ಲೈನ್‌ನಲ್ಲಿ ಪ್ರಾಥಮಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಗಣಿತ, ಇಂಗ್ಲಿಷ್ ಮತ್ತು ತಾರ್ಕಿಕ ಕೌಶಲ್ಯಗಳನ್ನು ಪರೀಕ್ಷಿಸಲಾಗುತ್ತದೆ.
ಮುಖ್ಯ ಪರೀಕ್ಷೆ: ಪ್ರಾಥಮಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಕರೆಯಲಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ವಿಷಯ-ಸಂಬಂಧಿತ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಸಂದರ್ಶನ: ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಅಭ್ಯರ್ಥಿಯ ಸಾಮಾನ್ಯ ಜ್ಞಾನ, ಸಂವಹನ ಕೌಶಲ್ಯ ಮತ್ತು ವ್ಯಕ್ತಿತ್ವವನ್ನು ಪರೀಕ್ಷಿಸಲಾಗುತ್ತದೆ.
ವೇತನ ವಿವರ:
ಆಯ್ಕೆಯಾದ ಅಭ್ಯರ್ಥಿಯು ಸ್ವೀಕರಿಸುವ ಒಟ್ಟು ವೇತನವು ಪೋಸ್ಟಿಂಗ್ ಸ್ಥಳವನ್ನು ಅವಲಂಬಿಸಿ ₹32,000 ರಿಂದ ₹35,200 ಮಾಸಿಕ ವೇತನ ನೀಡಲಾಗುತ್ತದೆ.
ಪರೀಕ್ಷಾ ವಿಧಾನ:
ಅಭ್ಯರ್ಥಿಗಳ ಆಯ್ಕೆಗಾಗಿ ಆನ್ಲೈನ್ ಮೂಲಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅನ್‌ಲೈನ್ ಪರೀಕ್ಷೆಯಲ್ಲಿ ಐದು ವಿಭಾಗಗಳನ್ನು ಕೇಳಲಾಗುತ್ತದೆ: ಲಾಜಿಕಲ್ ರೀಸನಿಂಗ್, ಇಂಗ್ಲಿಷ್ ಭಾಷೆ, ಸಾಮಾನ್ಯ ಅರಿವು, ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ಕಂಪ್ಯೂಟರ್ ಕೌಶಲ್ಯ. ಪರೀಕ್ಷೆಯು ಒಟ್ಟು 120 ನಿಮಿಷಗಳು (2 ಗಂಟೆಗಳು) ಇರುತ್ತದೆ. ಪರೀಕ್ಷೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಇರುತ್ತವೆ, ಪ್ರಶ್ನೆಯನ್ನು ತಪ್ಪಾಗಿ ಉತ್ತರಿಸಿದರೆ ಅಭ್ಯರ್ಥಿಯ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.