ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಎಲ್‌ಐಸಿ ಹೌಸಿಂಗ್ ಫೈನಾನ್ಸ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 250 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಶಿಷ್ಯವೃತ್ತಿ ತರಬೇತಿ ಯೋಜನೆ (NATS) ಅಧಿಕೃತ ವೆಬ್ ಸೈಟ್ nats.education.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ಅಪ್ರೆಂಟಿಸ್ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಪರೀಕ್ಷಾ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ – 30-06-2025
ಶೈಕ್ಷಣಿಕ ಅರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ(Any Degree) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಜೂನ್ 01, 2025 ರಂತೆ –
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಸ್ಟೈಫಂಡ್:
ಆಯ್ಕೆಯಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಗೆ ಮಾಸಿಕ 12,000ರೂ. ಸ್ಟೈಫಂಡ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈಯಕ್ತಿಕ ಸಂದರ್ಶನ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಓಬಿಸಿ ವರ್ಗದ ಅಭ್ಯರ್ಥಿಗಳಿಗೆ – 944ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 708 ರೂ.
ಅಂಗವಿಕಲ ಅಭ್ಯರ್ಥಿಗಳಿಗೆ – 472 ರೂ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆಯನ್ನು ಓದಿ.
ರಾಷ್ಟ್ರೀಯ ಶಿಷ್ಯವೃತ್ತಿ ತರಬೇತಿ ಯೋಜನೆ (NATS) ಅಧಿಕೃತ ವೆಬ್ ಸೈಟ್ https://nats.education.gov.in/student_type.php ಗೆ ಭೇಟಿ ನೀಡಿ.
ವಿದ್ಯಾರ್ಥಿ ನೋಂದಣಿ ಅಥವಾ ವಿದ್ಯಾರ್ಥಿ ಲಾಗಿನ್ ಆಗಿ.
ಅರ್ಜಿ ಸಲ್ಲಿಸಿ ಅಡಿಯಲ್ಲಿ ಎಲ್‌ಐಸಿ ಎಚ್‌ಎಫ್‌ಎಲ್ ಅಪ್ರೆಂಟಿಸ್ ನೇಮಕಾತಿ ಹುಡುಕಿ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ದಾಖಲಾತಿ ID ಯನ್ನು ಬರೆದಿಟ್ಟುಕೊಳ್ಳಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ತದನಂತರ ನಿಮಗೆ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ವಿವರ ಹಾಗೂ ಅರ್ಜಿ ಶುಲ್ಕ ಪಾವತಿ ಮಾಡಲು ಲಿಂಕ್ ಅನ್ನು BFSI SSC (info@bfsissc.com)ಇ-ಮೇಲ್ ನಿಂದ ಕಳುಹಿಸಲಾಗುತ್ತದೆ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.