Maharshi Valmiki Nigama Loan Scheme 2024: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
Valmiki Nigama Loan Scheme 2025
2025-26ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
√ ಸ್ವಯಂ ಉದ್ಯೋಗ ನೇರಸಾಲ ಯೋಜನೆ
√ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ
√ ಸ್ವಾವಲಂಬಿ ಸಾರಥಿ/ಐರಾವತ ಯೋಜನೆ
√ ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ
√ ಭೂ ಒಡೆತನ ಯೋಜನೆ
√ ಗಂಗಾ ಕಲ್ಯಾಣ ಯೋಜನೆ
ಸ್ವಯಂ ಉದ್ಯೋಗ ನೇರಸಾಲ ಯೋಜನೆ:
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.
- ಘಟಕ ವೆಚ್ಚ: ರೂ. 1.00 ಲಕ್ಷ
- ಸಹಾಯಧನ: ರೂ. 50,000/-
- ಸಾಲ: ರೂ. 50,000/- (ಶೇಕಡ 4ರಷ್ಟು ಬಡ್ಡಿದರ)
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ):
ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
- ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.1.00 ಲಕ್ಷ
- ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.2.00 ಲಕ್ಷ
ಸ್ವಾವಲಂಬಿ ಸಾರಥಿ:
ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ.
- ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 4.00 ಲಕ್ಷ
ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:
ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು.
- ಘಟಕ ವೆಚ್ಚ: ರೂ. 2.50 ಲಕ್ಷ
- ಸಹಾಯಧನ: ರೂ.1.50 ಲಕ್ಷ
- ಸಾಲ: ರೂ. 1.00 ಲಕ್ಷ (ಶೇಕಡ 4ರಷ್ಟು ಬಡ್ಡಿದರ)
ಭೂ ಒಡೆತನ ಯೋಜನೆ:
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು.
- ಘಟಕ ವೆಚ್ಚ: ರೂ. 25.00 ಲಕ್ಷ / ರೂ. 20.00 ಲಕ್ಷ
- ಸಹಾಯಧನ: ಶೇ. 50%
- ಸಾಲ: ಶೇ. 50% (ಶೇಕಡ 6ರಷ್ಟು ಬಡ್ಡಿದರ)
ಗಂಗಾ ಕಲ್ಯಾಣ ಯೋಜನೆ:
1.20 ಎಕರೆ ಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್‌ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.
- ಘಟಕ ವೆಚ್ಚ: ರೂ. 4.75 ಲಕ್ಷ / ರೂ. 3.75 ಲಕ್ಷ – ಇದರಲ್ಲಿ ರೂ. 50,000/- ಸಾಲವೂ ಸೇರಿರುತ್ತದೆ
Last Date of Maharshi Valmiki Nigama Online Application 2024-25
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ Start Date: August 18, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: September 17, 2025
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ | ಎಸ್.ಟಿ ಸಹಾಯವಾಣಿ 9482-300-400 ಸಂಪರ್ಕಿಸುವುದು.
ಗಮನಿಸಿ: ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸತಕ್ಕದು.ಫಲಾಪೇಕ್ಷಿಗಳು ಈ ಕೆಳಕಂಡ ಲಿಂಕ್‌ನಲ್ಲಿ ಸಹ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ
ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.
Important Direct Links:
Online Application Form Link | |
ಅಧಿಕೃತ ಜಾಲತಾಣ | kmvstdcl.karnataka.gov.in |
ಮತ್ತಷ್ಟು ಮಾಹಿತಿಗಾಗಿ | KarnatakaHelp.in |
ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2025 Karnataka Apply Online
‘ಐರಾವತ ಯೋಜನೆ’ 4.00 ಲಕ್ಷ ಸಹಾಯಧನ | Airavata Scheme Karnataka Online Application 2025
FAQs – ST Nigama Loan Scheme 2025
How to Apply For Valmiki Nigama Loan Scheme 2025-26?
Visit Official Website to Apply Online For ST Subsidy Loan Schemes
What is the Last Date Of Maharshi Valmiki Nigama Online Application 2025?
September 17, 2025