ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾದ್ಯಮ) ಶಾಲೆಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ(MAMS Admission 2025-26 Karnataka)ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಅಜಾದ್ ಮಾದರಿ ಶಾಲೆ[Maulana Azad Model School (MAMS)]ಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಗಳಿಗೆ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) 75% ರಷ್ಟು ಮೀಸಲಾತಿ.
ಇತರೆ ವರ್ಗದ (ಎಸ್.ಸಿ(SC), ಎಸ್.ಟಿ(ST), ಹಾಗೂ ಒ.ಬಿ.ಸಿ(OBC) 25% ರಷ್ಟು ಮಿಸಲಾತಿ.
ಕರ್ನಾಟಕದಾದ್ಯಂತ 250 ಶಾಲೆಗಳಲ್ಲಿ 6ನೇ ತರಗತಿಗೆ ಒಟ್ಟು 15,000 ಸೀಟುಗಳು ಲಭ್ಯವಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. (ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಅಂಕಪಟ್ಟಿ ಇರಬೇಕು.)
ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ವಿದ್ಯಾರ್ಥಿಯು 10 ರಿಂದ 13 ವಯಸ್ಸಿನನವರಾಗಿರಬೇಕು.
Last Date of Moulana Azad School Admission 2025 Exam
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 15-04-2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ(Last Date) – 10-05-2025
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
SATS ಸಂಖ್ಯೆ
ಆಧಾರ್ ಸಂಖ್ಯೆ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.
ಆದಾಯ ಮತ್ತು ಜಾತಿ ಪ್ರಮಾಣ ಪತ್ರ
ಅಂಗವಿಕಲ ಪ್ರಮಾಣ ಪತ್ರ
ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
How to Apply for Karnataka MAMS Admission 2025-26
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
ಇ-ಮೇಲ್ ಐಡಿ / ಮೊಬೈಲ್ ನಂಬರ್ ನಮೂದಿಸಿ ಪಾಸ್ವರ್ಡ್ ಸಲ್ಲಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ 2025-26 ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ನಮೂನೆ ತೆಗೆದುಕೊಳ್ಳುತ್ತದೆ. ಅಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಅರ್ಜಿಯನ್ನು ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌಗ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ – ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ/ ಮೌಲಾನಾ ಆಜಾದ್ ಮಾದರಿ ಶಾಲೆಗಳು / ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಸಂಪರ್ಕಿಸಿ. ಅಥವಾ