ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ವಿವಿಧ ತಂತ್ರಾಂಶಗಳ ಅನುಷ್ಠಾನ ಮತ್ತು ಪ್ರಗತಿಯ ಬಗ್ಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯ ಇ-ಪಂಚಾಯತ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯತ್ ನಲ್ಲಿ ಪ್ರಸ್ತುತ ಖಾಲಿ ಇರುವ ಓರ್ವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ -(01) ಹುದ್ದೆಗೆ ಅಭ್ಯರ್ಥಿಯನ್ನು ಗೌರವಧನ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಸದರಿ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಮಂಡ್ಯ ಜಿಲ್ಲಾ ಪಂಚಾಯತ್ ನ ಅಧಿಕೃತ ಜಾಲತಾಣ https://mandya.nic.in/ಕ್ಕೆ ಭೇಟಿ ನೀಡಿ. ನವೆಂಬರ್ 10ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 27, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 10, 2025
ಶೈಕ್ಷಣಿಕ ಅರ್ಹತೆ:
ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿ.ಇ (ಸಿ.ಎಸ್/ಇ&ಸಿ/ಐ.ಎಸ್/ಎ.ಐ) ಅಥವಾ ಎಂ.ಸಿ.ಎ ಅಥವಾ ಬಿ.ಸಿ.ಎ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 01 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
30-09-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟಿಂಗ್ ಸಂದರ್ಶನ ದಾಖಲೆ ಪರಿಶೀಲನೆ
ಅಭ್ಯರ್ಥಿಗಳ ಗಮನಕ್ಕೆ:
• ಅಭ್ಯರ್ಥಿಗಳು ಸಂದರ್ಶನ ಸಮಯದಲ್ಲಿ ಪರಿಶೀಲನೆಗಾಗಿ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು.
• ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಎಂ.ಎಸ್ ಆಫೀಸ್, ಪಂಚಾಯತ್ ರಾಜ್/ವಿವಿಧ ಇಲಾಖೆಗಳ ವೆಬ್ ಅಪ್ಲಿಕೇಷನ್ ಗಳ ನಿರ್ವಹಣೆ ಹಾಗೂ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು.
ಸಂಭಾವನೆ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 30,000ರೂ.ವರೆಗೆ ಸಂಭಾವನೆಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ:
• ಮೊದಲಿಗೆ ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ಪಂಚಾಯತ್ ನ ಅಧಿಕೃತ ಜಾಲತಾಣ https://mandya.nic.in/ಕ್ಕೆ ಭೇಟಿ ನೀಡಿ.
• ನಂತರ ಇತ್ತೀಚಿನ ಸುದ್ದಿಗಳು ವಿಭಾಗದ ಕೆಳಗೆ ನೀಡಲಾಗಿರುವ – “ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ” ಶೀರ್ಷಿಕೆಯ ಮೇಲೆ ಕ್ಲಿಕ್ ಮಾಡಿ.
• ಬಳಿಕ “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ನಿಮ್ಮನ್ನು ಮತ್ತೊಂದು ವೆಬ್ಸೈಟ್ ಗೆ ಮರು ನಿರ್ದೇಶಿಸಲಾಗುತ್ತದೆ.
• ಈಗ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರಗಳನ್ನು ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.