ಮಹಾನದಿ ಕೋಲ್‌ಫೀಲ್ಡ್ಸ್ ಲಿಮಿಟೆಡ್(MCL)ನಲ್ಲಿ ಸಹಾಯಕ ಫೋರ್‌ಮನ್ ಮತ್ತು ತಂತ್ರಜ್ಞ(ಎಲೆಕ್ಟ್ರಿಷಿಯನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
150 ಸಹಾಯಕ ಫೋರ್‌ಮನ್ ಹಾಗೂ 350 ತಂತ್ರಜ್ಞ(ಎಲೆಕ್ಟ್ರಿಷಿಯನ್) ಸೇರಿದಂತೆ ಒಟ್ಟು 500 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 28ರವರೆಗೆ ಕಾಲಾವಕಾಶವನ್ನು ನೀಡಲಾಗಿದ್ದು, 10ನೇ ತರಗತಿ ಹಾಗೂ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಎಂಸಿಎಲ್ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್ https://cdn.digialm.com/EForms/configuredHtml/1258/100512/Index.htmlಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 07, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 28, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 28, 2026
ಶೈಕ್ಷಣಿಕ ಅರ್ಹತೆ:
✓ಸಹಾಯಕ ಫೋರ್‌ಮನ್ ಹುದ್ದೆಗೆ; ಅಭ್ಯರ್ಥಿಗಳು AICTE ಅನುಮೋದಿತ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
✓ತಂತ್ರಜ್ಞ (ಎಲೆಕ್ಟ್ರಿಷಿಯನ್) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಎಲೆಕ್ಟ್ರಿಷಿಯನ್ ಟ್ರೇಡ್‌ನಲ್ಲಿ 02 ವರ್ಷಗಳ ಐಟಿಐ ಕೋರ್ಸ್ ಜೊತೆಗೆ NCVT/SCVT ನೀಡಿದ ಟ್ರೇಡ್ ಪ್ರಮಾಣ ಪತ್ರದೊಂದಿಗೆ ಕನಿಷ್ಠ 01 ವರ್ಷಗಳ ವೃತ್ತಿ/ತರಬೇತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
28-05-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು.
ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ವೈದ್ಯಕೀಯ ಪರೀಕ್ಷೆ
- ದಾಖಲೆ ಪರಿಶೀಲನೆ
ಸಂಬಳ:
ಸಹಾಯಕ ಫೋರ್‌ಮನ್ ಹುದ್ದೆಗಳಿಗೆ ₹47,330(ಮಾಹೆಯಾನ)
ತಂತ್ರಜ್ಞ(ಎಲೆಕ್ಟ್ರಿಷಿಯನ್) ಹುದ್ದೆಗಳಿಗೆ ₹1583(ಪ್ರತಿದಿನ)
ಅರ್ಜಿ ಶುಲ್ಕ:
ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹1180
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, ಮಹಿಳಾ ಹಾಗೂ ಕೋಲ್ ಇಂಡಿಯಾ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳ ಉದ್ಯೋಗಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು MCL ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/100512/Index.htmlಕ್ಕೆ ಭೇಟಿ ನೀಡಿ.
• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ, ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | https://mahanadicoal.in/ |
| More Updates | Karnatakahelp.in |
Gangavathi