ರಾಂಚಿ: ಭಾರತ ಸರ್ಕಾರದ ಉಕ್ಕಿನ ಸಚಿವಾಲಯದಡಿ ಬರುವ ಸಾರ್ವಜನಿಕ ವಲಯದ ಉದ್ದಿಮೆಯಾಗಿರುವ ಮೆಟಲರ್ಜಿಕಲ್ ಮತ್ತು ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್(MECON) ಲಿಮಿಟೆಡ್ ಅನುಭವಿ ವೃತ್ತಿಪರರನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.
ಬೆಂಗಳೂರು, ದೆಹಲಿ, ರಾಂಚಿ, ಕೊಲ್ಕತ್ತಾದಲ್ಲಿ ಸಂದರ್ಶನ ಜರುಗಲಿದೆ. ವಿವಿಧ ವಿಭಾಗಗಳ ಎಂಜಿನಿಯರ್ ಹಾಗೂ ಕಾರ್ಯನಿರ್ವಾಹಕ ಹುದ್ದೆಗಳಿಗೆ ಒಟ್ಟು 103 ಸ್ಥಾನಗಳಿಗೆ ಪೂರ್ಣ ಸಮಯದ ಸ್ಥಿರ ಅವಧಿ(ಎಫ್‌ಟಿಎಫ್‌ಟಿ) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಆನ್‌ಲೈನ್ ನೋಂದಣಿಗೆ ಮೇ 11ರವರೆಗೆ ಕಾಲಾವಕಾಶ ನೀಡಲಾಗಿದೆ. ಆಸಕ್ತರು ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಅಧಿಸೂಚನೆಯಲ್ಲಿ ಪರಿಶೀಲಿಸಿ, ಎಂಸಿಒಎನ್ ಅಧಿಕೃತ ಜಾಲತಾಣ https://careers.meconlimited.co.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 27, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 11, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 11, 2026
- ವಾಕ್-ಇನ್ ಸಂದರ್ಶನ ದಿನಾಂಕಗಳು – ಮುಂಬರುವ ದಿನಗಳಲ್ಲಿ ಅಧಿಕೃತ ಜಾಲತಾಣದಲ್ಲಿ ತಿಳಿಸುವುದಾಗಿ ಸಂಸ್ಥೆ ಅಧಿಸೂಚನೆಯಲ್ಲಿ ತಿಳಿಸಿದೆ.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ವಿಭಾಗದಲ್ಲಿ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಸ್ನಾತಕೋತರ ಪದವಿ/ಸ್ನಾತಕೋತರ ಡಿಪ್ಲೋಮಾ, ಪದವಿಯೊಂದಿಗೆ ಎಂಬಿಎ/ಪಿಜಿಡಿಎಂ ಅಥವಾ ಇತರೆ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು ಜೊತೆಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ 02 ರಿಂದ 16 ವರ್ಷಗಳವರೆಗೆ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು
ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು
ಪಿಡಬ್ಲ್ಯೂಬಿಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ₹43,880 ಗಳಿಂದ ₹78,390ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹500
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• MECON ಅಧಿಕೃತ ಜಾಲತಾಣ https://careers.meconlimited.co.in/ಕ್ಕೆ ಭೇಟಿ ನೀಡಿ.
• *ದೆಹಲಿ, ರಾಂಚಿ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ವಾಕ್-ಇನ್-ಇಂಟರ್ವ್ಯೂಗಳ ಮೂಲಕ ಪೂರ್ಣ ಸಮಯದ ಸ್ಥಿರ ಅವಧಿ (FTFT) ಆಧಾರದ ಮೇಲೆ ಅನುಭವಿ ವೃತ್ತಿಪರರ ಒಪ್ಪಂದದ ನಿಯೋಜನೆಗಾಗಿ ನೇಮಕಾತಿ(RECRUITMENT FOR CONTRACTUAL ENGAGEMENT OF EXPERIENCED PROFESSIONALS ON FULL TIME FIXED TENURE (FTFT) BASIS THROUGH WALK -IN-INTERVIEWS AT DELHI, RANCHI, KOLKATA & BANGALORE)* ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಆಯ್ಕೆಯನ್ನು ಆರಿಸಿ.
• ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.meconlimited.co.in |
| More Updates | KarnatakaHelp.in |