ಭಾರತೀಯ ರಕ್ಷಣಾ ಸಚಿವಾಲಯವು ಭಾರತೀಯ ನೌಕಾಪಡೆಯ ನೇವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನೇವಲ್ ಶಿಪ್ ರಿಪೇರ್ ಯಾರ್ಡ್ ಅಪ್ರೆಂಟಿಸ್ ನೇಮಕಾತಿಯಲ್ಲಿ ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ (ಡೀಸೆಲ್), ICTSM ಸೇರಿದಂತೆ ಹಲವಾರು ತಾಂತ್ರಿಕ ವಿಭಾಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಷಿನಿಸ್ಟ್, COPA (ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ), ಮತ್ತು ವೆಲ್ಡರ್. ವಿಭಾಗಳ ಒಟ್ಟು 50 ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. SSLC ಜೊತೆಗೆ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಪಾಸ್ ಮಾಡಿರುವ ಅಭ್ಯರ್ಥಿಗಳು ಈ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೇವಲ್ ಶಿಪ್ ರಿಪೇರ್ ಯಾರ್ಡ್ ಅಪ್ರೆಂಟಿಸ್ ನೇಮಕಾತಿ 2024ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ apprenticeship.recttindia.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Shortview of Naval Ship Repair Yard Recruitment 2024
Organization Name – Apprentice Training School Naval Ship Repair Yard(NSRY)
Post Name – Apprentice
Total Vacancy – 50
Application Process: Online
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 19, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 06 ,2024
ವಿದ್ಯಾರ್ಹತೆ:
SSLC ಜೊತೆಗೆ ತರಬೇತಿ ನೀಡುವ ವಿಭಾಗಕ್ಕೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ(ITI) ಪಾಸ್ ಮಾಡಿರಬೇಕು.
ವಯೋಮಿತಿ:
ನೇವಲ್ ಶಿಪ್ ರಿಪೇರ್ ಯಾರ್ಡ್ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳ ಮೇಲ್ಪಟ್ಟಿರಬೇಕು.
ವೇತನ ವಿವರ:
ನೇವಲ್ ಶಿಪ್ ರಿಪೇರ್ ಯಾರ್ಡ್ ಹಾಗೂ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ವೇಳೆ ಮಾಸಿಕವಾಗಿ ₹7000- ₹8000 ವರೆಗೆ ಸ್ಟೈಫಂಡ್ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಐಟಿಐ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
How to Apply for Naval Ship Repair Yard Apprenticeship Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ…?
- ಮೊದಲಿಗೆ ಇಂಡಿಯನ್ ನೇವಿಯ ಅಧಿಕೃತ ವೆಬ್ ಸೈಟಿಗೆ https://indiannavy.nic.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ Navy Apprenticeship Training (IT-01 BATCH) 2024-25ಲಿಂಕ್ ಕ್ಲಿಕ್ ಮಾಡಿ.
- ಅಗತ್ಯ ವಿವರಗಳನ್ನು ನಮೂದಿಸಿ ಖಾತೆಯನ್ನು ರಚಿಸಿ, ನಂತರ ಲಾಗಿನ್ ಮಾಡಿ.
- ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಒದಗಿಸಿ.
- ಫೋಟೋ ಮತ್ತು ಸಿಗ್ನೇಚರ್ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಲ್ಲಿಸು ಕ್ಲಿಕ್ ಮಾಡಿ.
Important Direct Links:
Official Notification PDF | Download |
Online Application Link | Registration || Login |
Official Website | indiannavy.nic.in |
More Updates | Karnataka Help.in |