Minority Free Coaching KAS, IAS 2024-25:ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
2024 25 ನೇ ಸಾಲಿನ ಮುಸ್ಲಿಂ ಕ್ರಿಶ್ಚಿಯನ್ ಜೈನ ಬೌದ್ಧ ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಆಗಸ್ಟ್ 31ರ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ, ಈ ಮಾಹಿತಿಯನ್ನು ಪೂರ್ತಿಯಾಗಿ ಕೊನೆಯವರೆಗೆ ಓದಿ.
How to Apply for Minority Free Coaching Online Application 2024-25
ಅರ್ಜಿ ಸಲ್ಲಿಕೆ ಹೇಗೆ?: ಅಭ್ಯರ್ಥಿಗಳು ಸೇವಾ ಸಿಂಧು https://sevasindhuservices.karnataka.gov.in/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್, 31ರ ಮೊದಲು ಅರ್ಜಿ ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯವಾಣಿ 87222 99990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರ ಪ್ರಕಟಣೆ ತಿಳಿಸಿದೆ.