ಪ್ರಸಕ್ತ ಸಾಲಿನ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Minority Pre Matric Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ (ಮೆಟ್ರಿಕ್ ಪೂರ್ವ) 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in/ssppre/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಪ್ರಸ್ತುತ 2025-26ನೇ ಶೈಕ್ಷಣಿಕ ವರ್ಷದಲ್ಲಿ 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷರೂ. ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ
ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in/ssppre/ ಗೆ ಭೇಟಿ ನೀಡಿ.
ಬಳಕೆದಾರರ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
ಅಲ್ಪಸಂಖ್ಯಾತರ ಇಲಾಖೆಯ 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ (1ರಿಂದ 8ನೇ ತರಗತಿ) ವಿದ್ಯಾರ್ಥಿವೇತನ ಆನ್‌ಲೈನ್ ಅರ್ಜಿ ಆಹ್ವಾನ ಅರ್ಜಿ ಹುಡುಕಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಅಗತ್ಯ ಮಾಹಿತಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ವಿಶೇಷ ಸೂಚನೆ
2024-25ನೇ ಸಾಲಿನಲ್ಲಿ ಅನುಮೋದನೆಗೊಂಡ ಅರ್ಜಿಗಳು ಹಾಗೂ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
2024-25ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದು.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು.
ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಿಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping Active ಆಗಿರುವ ಬಗ್ಗೆ ಖಚಿತಪಡಿಸಿಕೊಂಡಿರಬೇಕು.
ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.