ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ; ಅರ್ಜಿ ಆಹ್ವಾನ
2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆ(MDRS GMRS Dr APJAKRS)ಗಳ 6ನೇ ತರಗತಿ ಪ್ರವೇಶಾತಿಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಒಳಗೊಂಡಂತೆ ಒಟ್ಟು 173 ಶಾಲೆಗಳಲ್ಲಿ ಪ್ರಸ್ತುತ 12,550+ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಫೆ.10 ರೊಳಗೆ ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
6ನೇ ತರಗತಿ ಪ್ರವೇಶಾತಿಗೆ ಪ್ರಸ್ತುತ ಖಾಲಿ ಇರುವ ಸೀಟುಗಳ ವಿವರ:
140 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ರಾಜ್ಯ ಪಠ್ಯಕ್ರಮ) – 10,460 ಸೀಟುಗಳು ಖಾಲಿ ಇವೆ
29 ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ (ಸಿ.ಬಿ.ಎಸ್.ಸಿ ಪಠ್ಯಕ್ರಮ) – 1,830 ಸೀಟುಗಳು ಖಾಲಿ ಇವೆ
04 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ (ರಾಜ್ಯ ಪಠ್ಯಕ್ರಮ)- 260 ಸೀಟುಗಳು ಖಾಲಿ ಇವೆ
ಒಟ್ಟು 173 ವಸತಿ ಶಾಲೆಗಳಲ್ಲಿ – 12,550 ಸೀಟುಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅಥವಾ ಉತ್ತೀರ್ಣರಾಗಿರಬೇಕು ಜೊತೆಗೆ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಅಂಕ ಪಟ್ಟಿಯನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 09 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 13 ವರ್ಷಗಳು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:
• ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ • ಮಾನ್ಯವಾದ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ • ಆಧಾರ್ ಕಾರ್ಡ್ • ಜಾತಿ ಮತ್ತು ಆದಾಯ ಪ್ರಮಾಣ ಪತ್ರ • ಅಂಗವಿಕಲ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ) • ವಿಶೇಷ ವರ್ಗಗಳ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ)
ಆಯ್ಕೆ ವಿಧಾನ:
ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ರೋಸ್ಟರ್ ವಿಧಾನದ ಮೂಲಕ ವಿದ್ಯಾರ್ಥಿ ಆಯ್ಕೆ ಬಯಸುವ ಜಿಲ್ಲೆಯಲ್ಲಿ ಸೀಟು ಹಂಚಿಕೆ ಮಾಡಿ, ವಿದ್ಯಾರ್ಥಿಗಳನ್ನು ಪ್ರವೇಶಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
• ಮೊದಲಿಗೆ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ಗೆ ಭೇಟಿ ನೀಡಿ.
• ಇಮೇಲ್ ಐಡಿ/ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ.
• “ಅಲ್ಪಸಂಖ್ಯಾತರ ನಿರ್ದೇಶನಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 2026-27ನೇ ಶೈಕ್ಷಣಿಕ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ” ಅರ್ಜಿ ನಮೂನೆ ಆಯ್ಕೆ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.