ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿಗಾಗಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ (ಬೆಂಗಳೂರು ಹೊರತುಪಡಿಸಿ) 3 ತಿಂಗಳ UPSC ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ -13-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 21-06-2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿದವರಾಗಿರಬೇಕು.
ಅಭ್ಯರ್ಥಿಯು UPSC 2025 ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ತರಬೇತಿಯ ಅವಧಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂರು ತಿಂಗಳ ಅವಧಿಗೆ UPSC ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತದೆ.
ತರಬೇತಿ ನೀಡುವ ಸ್ಥಳ ಹಾಗೂ ಶಿಷ್ಯವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ (ಬೆಂಗಳೂರು ಹೊರತುಪಡಿಸಿ) ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ UPSC ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅಲ್ಪಸಂಖ್ಯಾತ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಿ.
2025-26ನೇ ಸಾಲಿಗೆ UPSC ಮುಖ್ಯ ಪರೀಕ್ಷಾ ತರಬೇತಿ ಪಡೆಯಲು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಹುಡುಕಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ:
ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ – 8277799990 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
Good