MRPLನಲ್ಲಿ ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ನೇಮಕಾತಿ

Published on:

ಮಂಗಳೂರು: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಷನ್‌ನ ಅಂಗಸಂಸ್ಥೆಯಾಗಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌(ಎಂಆರ್‌ಪಿಎಲ್‌)ನಲ್ಲಿ ಖಾಲಿ ಇರುವ 05 ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟವಾಗಿದೆ.

ಸ್ಥಿರ-ಅವಧಿ ಉದ್ಯೋಗ(ಪಿಎಫ್‌ಟಿಇ) ಆಧಾರದಡಿ ಕಾರ್ಯನಿರ್ವಾಹಕ ಹಂತ ಎಲ್‌1 ಮಟ್ಟದಡಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜು.16ರವರೆಗೆ ಕಾಲಾವಕಾಶ ನೀಡಲಾಗಿದೆ. ಸಂಬಂಧಿತ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವೀಧರರು ಅರ್ಜಿ ಸಲ್ಲಿಸಲು ಎಂಆರ್‌ಪಿಎಲ್‌ ಅಧಿಕೃತ ವೆಬ್ಸೈಟ್ https://mrplregistration.ibtexamination.com/AppMrpl2o26/ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜೂನ್ 17, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 16, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಅಗ್ನಿಶಾಮಕ/ಅಗ್ನಿಶಾಮಕ ಮತ್ತು ಸುರಕ್ಷತೆ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

16-07-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ 50 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 05 ವರ್ಷಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

  • ಲಿಖಿತ (ಸ್ಕ್ರೀನಿಂಗ್) ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ಮೆರಿಟ್ ಪಟ್ಟಿ

ವೇತನ:

ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 13-14ಲಕ್ಷರೂ.ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ.118
  • ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು MRPL ಅಧಿಕೃತ ವೆಬ್ಸೈಟ್ https://mrplregistration.ibtexamination.com/AppMrpl2o26/ ಗೆ ಭೇಟಿ ನೀಡಿ.

• ಬಳಿಕ ಅರ್ಜಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

Mrpl Fo Online Form 2026
Mrpl Fo Online Form 2026

• ಅರ್ಜಿಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websitewww.mrpl.co.in
More UpdatesKarnatakaHelp.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

1 thought on “MRPLನಲ್ಲಿ ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ನೇಮಕಾತಿ”

Leave a Comment