Murarji PUC Admission 2025-26: ಪದವಿ ಪೂರ್ವ ವಸತಿ ಕಾಲೇಜುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

KREIS Murarji PUC Admission 2025-26
KREIS Murarji PUC Admission 2025-26

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು(Murarji PUC Admission 2025-26), ಡಾ.ಎಪಿಜೆ ಅಬ್ದುಲ್‌ ಕಲಾಂ ಪದವಿ ಪೂರ್ವ ವಸತಿ ಕಾಲೇಜುಗಳ 2025–26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 10ನೇ ತರಗತಿ ಉತ್ತೀರ್ಣರಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಡಾ.ಎಪಿಜೆ ಅಬ್ದುಲ್‌ ಕಲಾಂ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಉಚಿತವಾಗಿ ಊಟ, ವಸತಿ, ಪುಸ್ತಕ, ಸಮವಸ್ತ್ರ ಹಾಗೂ ಇತರ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

SSLC ಫಲಿತಾಂಶ ಪ್ರಕಟವಾದ ನ೦ತರದ ಮೊದಲ ಕಾರ್ಯನಿರತ ದಿನದಿಂದ ಅರ್ಜಿ ಸಲ್ಲಿಕೆ ಪ್ರಾರಂಭ – 03-05-2025

ವಸತಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಸೌಲಭ್ಯಗಳು

  • ಅನುಭವಿ ಹಾಗೂ ನುರಿತ ಉಪನ್ಯಾಸಕರಿಂದ ಬೋಧನೆ.
  • ಸ್ಮಾರ್ಟ್ ಕ್ಲಾಸ್ ಸೌಲಭ್ಯ
  • ಗುಣಮಟ್ಟದ ಸುಸಜ್ಜಿತ ಪ್ರಯೋಗಾಲಯ
  • ಕಂಪ್ಯೂಟರ್, ಗ್ರಂಥಾಲಯ, ಸಭಾಂಗಣ, ಆಟದ ಮೈದಾನ ಹಾಗೂ ಜಿಮ್ ವ್ಯವಸ್ಥೆ.
  • ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ Physics Wallah ವತಿಯಿಂದ ಉಚಿತ CET/NEET/JEE ಪರೀಕ್ಷೆಗಳಿಗೆ ತರಬೇತಿ.
  • ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಉಚಿತ CA ಫೌಂಡೇಷನ್ / CLAT ತರಬೇತಿ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

  • ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು.
  • ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
  • ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇಕಡಾ.75 ರಷ್ಟು ಪ್ರವೇಶ ಮೀಸಲಿರಿಸಿದೆ.
  • ಶೇಕಡ.25 ರಷ್ಟು ಸ್ಥಾನಗಳನ್ನು ಹಿಂದುಳಿದ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಪ್ರವೇಶಕ್ಕೆ ಮೀಸಲಿರಿಸಿದೆ.
  • ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ /ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷ ರೂ. ಗಳನ್ನು ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಲ್ಪಸಂಖ್ಯಾತರ ಪೋಷಕರು / ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ತಮಗೆ ಹತ್ತಿರವಿರುವ ಸೈಬರ್ ಸೆಂಟರ್ ಗೆ ಭೇಟಿ ನೀಡಿ

ಸೇವಾ ಸಿಂಧು ಪೋರ್ಟಲ್ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

Important Direct Links:

KREIS PUC Admission 2025-26 Online Application Form Linksevasindhuservices.karnataka.gov.in
Official Websitedom.karnataka.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment