ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರಿನ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಟಿ.ನರಸೀಪುರ, ಬಿಳಿಕೆರೆ, ನಂಜನಗೂಡು ಹಾಗೂ ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿಯಿರುವ ವಿವಿಧ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Women & Child Development (WCD) Post Name – Anganwadi Worker and Helper Total Vacancy – 319 Application Process – Online Job Location – Mysore
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
• ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 17-05-2025 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15-06-2025
ಖಾಲಿ ಇರುವ ಹುದ್ದೆಗಳ ವಿವರ
ಪಿರಿಯಾಪಟ್ಟಣ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – ಅಂಗನವಾಡಿ ಕಾರ್ಯಕರ್ತೆ 05, ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆ 06 ಹಾಗೂ 57 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದೆ.
ಟಿ.ನರಸೀಪುರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 03 ಅಂಗನವಾಡಿ ಕಾರ್ಯಕರ್ತೆ ಮತ್ತು 28 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದೆ.
ಬಿಳಿಕೆರೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆ-05, ಮಿನಿ ಅಂಗನವಾಡಿ ಕಾರ್ಯಕರ್ತೆ 01 ,ಹಾಗೂ ಅಂಗನವಾಡಿ ಸಹಾಯಕಿಯರ 32 ಹುದ್ದೆಗಳು ಖಾಲಿ ಇದೆ.
ನಂಜನಗೂಡು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 31 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದೆ.
ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 06 ಅಂಗನವಾಡಿ ಕಾರ್ಯಕರ್ತೆ ಹಾಗೂ 12 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ತೇರ್ಗಡೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್. ಸಿ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ವಯೋಮಿತಿ:
ಅಭ್ಯರ್ಥಿಗಳಿಗೆ ಜೂನ್ 15-06-2025 ಕ್ಕೆ 19 ವರ್ಷ ಪೂರ್ಣಗೊಂಡಿರಬೇಕು.
• ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು.
ವಿಶೇಷ ಸೂಚನೆ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಂತ್ರಾoಶದಲ್ಲಿ ಅಳವಡಿಸುವ ಅರ್ಜಿ ಸಲ್ಲಿಕೆ ಮಾರ್ಗ ಸೂಚಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ(How to Apply)
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಗೆ ಭೇಟಿ ನೀಡಿ.
ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ.
ನಂತರ ನಿಮ್ಮ ಭಾವಚಿತ್ರ ಸಹಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯನ್ನು ಮುದ್ರಿಸಿ.
ಹೆಚ್ಚಿನ ಮಾಹಿತಿಗಾಗಿ:
ಪಿರಿಯಾಪಟ್ಟಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ- 08223-274742, ಟಿ.ನರಸೀಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ-08227-297267, 7019403686, ಬಿಳಿಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ- 08221-29717, ನಂಜನಗೂಡು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ-08221-297188, ಮೈಸೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ-0821-2567940 ಅನ್ನು ಸಂಪರ್ಕಿಸಬಹುದು ಎಂದು ಟಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.