Mysore City Corporation Vacancy 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಭರ್ತಿ ಮಾಡಲು ನೇಮಕಾತಿಯಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಹುಟ್ಟು 252 ಪೌರಕಾರ್ಮಿಕರ ಹುದ್ದೆಗೆ ಹದಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಕ್ಷೇಮಾಭಿವೃದ್ಧಿ ನಿಯಮದ ಅಡಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಅಡಿ ಪೌರಕಾರ್ಮಿಕ ಹುದ್ದೆಯಲ್ಲಿ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಹ ಅಭ್ಯರ್ಥಿಗಳು ಅರ್ಹ ಅಭ್ಯರ್ಥಿಗಳು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಪಾಲಿಕೆಯ ಆಯುಕ್ತರಿಗೆ ಸಲ್ಲಿಸಬೇಕು.