ಜಿಲ್ಲಾ ನ್ಯಾಯಾಲಯದಲ್ಲಿ ನಾನಾ ಹುದ್ದೆಗಳ ನೇಮಕಾತಿ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ ಅರ್ಹತೆ | ಏ.28ರಿಂದ ಅರ್ಜಿ ಸಲ್ಲಿಸಿ

Published on:

Updated On:

ಮೈಸೂರು: ಇಲ್ಲಿನ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ನಾನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರ್ಜಿ ಆಹ್ವಾನಿಸಿದೆ.

04 ಸ್ಟೆನೋಗ್ರಾಫರ್ ಗ್ರೇಡ್-III, 03 ಬೆರಳಚ್ಚುಗಾರ, 11 ಪ್ರೊಸೆಸ್ ಸರ್ವರ್ ಹಾಗೂ 75-ಪ್ಯೂನ್‌ ಸೇರಿದಂತೆ ಒಟ್ಟು 93 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://mysuru.dcourts.gov.in/Judges/online-recruitment/ಕ್ಕೆ ಭೇಟಿ ನೀಡಿ, ಮೇ 31ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 28, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 31, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 02, 2026

ಶೈಕ್ಷಣಿಕ ಅರ್ಹತೆ:

✓ ಸ್ಟೆನೋಗ್ರಾಫರ್ (ಶೀಘ್ರಲಿಪಿಗಾರರು) ಗ್ರೇಡ್-III ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿ.ಯು.ಸಿ/ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಡಿಪ್ಲೋಮೋ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

✓ ಟೈಪಿಸ್ಟ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿ.ಯು.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

✓ ಪ್ರೊಸೆಸ್ ಸರ್ವರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

✓ ಪ್ಯೂನ್‌ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು

ಗರಿಷ್ಠ ವಯಸ್ಸಿನ ಮಿತಿ;

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು
ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು

ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಆಯ್ಕೆ ವಿಧಾನ:

  • ಅರ್ಹತಾ ಪರೀಕ್ಷೆ
  • ಕಂಪ್ಯೂಟರ್ ಸಾಮರ್ಥ್ಯ ಪರೀಕ್ಷೆ
  • ಸಂದರ್ಶನ
  • ಅಂತಿಮ ಆಯ್ಕೆ

ಸಂಬಳ:

ಸ್ಟೆನೋಗ್ರಾಫರ್ ಹುದ್ದೆಗಳಿಗೆ ₹44,425-83,700
ಟೈಪಿಸ್ಟ್ ಹುದ್ದೆಗಳಿಗೆ ₹34,100-67,600
ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ₹31,175-61,300
ಪಿಯೋನ್ ಹುದ್ದೆಗಳಿಗೆ ₹27,000-46,675

ಅರ್ಜಿ ಶುಲ್ಕ:

✓ ಪಿಯೋನ್ ಹುದ್ದೆಗೆ; ಸಾಮಾನ್ಯ ಅಭ್ಯರ್ಥಿಗಳಿಗೆ ₹200, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹100, ಪ.ಜಾತಿ, ಪ.ಪಂಗಡ, ಅಂಗವಿಕಲ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

✓ ಉಳಿದ ಎಲ್ಲಾ ಹುದ್ದೆಗಳಿಗೆ; ಸಾಮಾನ್ಯ ಅಭ್ಯರ್ಥಿಗಳಿಗೆ ₹300, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹150, ಪ.ಜಾತಿ, ಪ.ಪಂಗಡ, ಅಂಗವಿಕಲ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ?

• ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://mysuru.dcourts.gov.in/Judges/online-recruitment/ಕ್ಕೆ ಭೇಟಿ ನೀಡಿ.

• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Peon Official Notification PDFDownload
Stenographer Official Notification PDFDownload
Process Server Official Notification PDFDownload
Typist Copyist Official Notification PDFDownload
Peon Online Form LinksApply Now
Stenographer Online Form LinksApply Now
Process Server Online Form LinksApply Now
Typist Copyist Online Form LinksApply Now
Official Websitemysuru.dcourts.gov.in
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

4 thoughts on “ಜಿಲ್ಲಾ ನ್ಯಾಯಾಲಯದಲ್ಲಿ ನಾನಾ ಹುದ್ದೆಗಳ ನೇಮಕಾತಿ”

Leave a Comment