ಮೈಸೂರು: ಜಿಲ್ಲಾ ಕೃಷಿ ಇಲಾಖೆಯ ‘ಆತ್ಮ’ ಯೋಜನೆಯಡಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ(ಟಿಟಿಎಂ) ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕ(ಎಟಿಎಂ) ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಟಿಎಂ 03, ಎಟಿಎಂ 09 ಸೇರಿದಂತೆ ಒಟ್ಟು 12 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಕೃಷಿ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಳು ಅಧಿಕೃತ ಜಾಲತಾಣ https://mysore.nic.in/ದಲ್ಲಿ ಅರ್ಜಿ ನಮೂನೆ ಪಡೆದು ತುಂಬಿ, ನಿಗದಿತ ದಾಖಲೆಗಳನ್ನು ಲಗತ್ತಿಸಿ ಮೈಸೂರು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಆ.21ರೊಳಗೆ ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಮೂಲಕ ಸಲ್ಲಿಸಬಹುದು ಎಂದು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು:
- ಅಧಿಕೃತ ಅಧಿಸೂಚನೆಯ ದಿನಾಂಕ – ಆಗಸ್ಟ್ 03
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – ಆಗಸ್ಟ್ 21 ಸಂಜೆ 5:00 ಗಂಟೆಯೊಳಗೆ.
ಎಲ್ಲೆಲ್ಲಿ ಖಾಲಿ ಹುದ್ದೆ..?
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ(TTM): ಹೆಚ್.ಡಿ.ಕೋಟೆ, ಸರಗೂರು ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ತಲಾ 1 ಹುದ್ದೆ
ಸಹಾಯಕ ತಾಂತ್ರಿಕ ವ್ಯವಸ್ಥಾಪಕ(ATM): ಹೆಚ್.ಡಿ.ಕೋಟೆ, ಹುಣಸೂರು, ಕೆ.ಆರ್.ನಗರ, ಮೈಸೂರು, ನಂಜನಗೂಡು, ಪಿರಿಯಾಪಟ್ಟಣ, ತಿ.ನರಸೀಪುರ ತಾಲ್ಲೂಕುಗಳ ಕಸಬಾ ಹೋಬಳಿಗಳು – 7 ಹುದ್ದೆಗಳು; ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿ – 1 ಹುದ್ದೆ; ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ – 1 ಹುದ್ದೆ.
ವಿದ್ಯಾರ್ಹತೆ ಮತ್ತು ಅನುಭವ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ; ಕೃಷಿ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ(Post Graduate) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಥವಾ ಕೃಷಿ ಪದವೀಧರರಾಗಿದ್ದು, ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ(ATM) ಕನಿಷ್ಠ 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಜೊತೆಗೆ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 2 ವರ್ಷಗಳ ಕ್ಷೇತ್ರ ಅನುಭವ ಕಡ್ಡಾಯ.
ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ; ಕೃಷಿ ಮತ್ತು ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 45 ವರ್ಷದೊಳಗಿರಬೇಕು. ಈಗಾಗಲೇ ಆತ್ಮ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 60 ವರ್ಷಗಳಾಗಿರುತ್ತದೆ.
ಮಾಸಿಕ ವೇತನ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ರೂ.30,000/-
ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ರೂ.25,000/-
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://mysore.nic.in/ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಹಾಗೂ ಅಗತ್ಯವಿರುವ ದಾಖಲೆಗಳನ್ನು ದೃಢೀಕೃತ ಪ್ರತಿಗಳೊಂದಿಗೆ ಸೀಲು ಮಾಡಿದ ಲಕೋಟೆಯಲ್ಲಿ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಜಂಟಿ ಕೃಷಿ ನಿರ್ದೇಶಕರ ಕಚೇರಿ,
ಆತ್ಮ ವಿಭಾಗ, ಸಾರ್ವಜನಿಕ ಕಚೇರಿಗಳ ಕಟ್ಟಡ,
ನ್ಯೂ ಸಯ್ಯಾಜಿರಾವ್ ರಸ್ತೆ, ಮೈಸೂರು.
ಹೆಚ್ಚಿನ ವಿವರಗಳಿಗಾಗಿ ಜಂಟಿ ಕೃಷಿ ನಿರ್ದೇಶಕರು, ಮೈಸೂರು ಕಚೇರಿಯ ದೂರವಾಣಿ ಸಂಖ್ಯೆ: 0821-2442239 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
| Official Notification and Application Form PDF | Download |
| Official Website | mysore.nic.in |
| More Updates | KarnatakaHelp.in |