ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಗಾಗಿ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 46 ಪೌರಕಾರ್ಮಿಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಡಿ.30ರೊಳಗೆ ಜಿಲ್ಲೆಯ ಆಯಾ ನಗರ ಸಂಸ್ಥೆಗಳಲ್ಲಿ ಅರ್ಜಿ ನಮೂನೆ ಪಡೆದು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
• 2017ರ ಪೂರ್ವದಲ್ಲಿ ನೇಮಕಾತಿ ಹೊಂದಿ ಪ್ರಸ್ತುತ ನೇರ ಪಾವತಿಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಅರ್ಜಿ ಸಲ್ಲಿಸಬಹುದು.
• ನೇಮಕಾತಿಯ ಪೂರ್ಣ ಷರತ್ತು ಹಾಗೂ ನಿಯಮಗಳನ್ನು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ನಾಮಫಲಕದಲ್ಲಿ ಪ್ರಚುರಪಡಿಸಲಾಗಿದ್ದು, ಅರ್ಜಿದಾರರು ತಪ್ಪದೆ ನೇಮಕಾತಿಯ ಪೂರ್ಣ ಷರತ್ತು ಹಾಗೂ ನಿಯಮಗಳನ್ನು ಓದಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ) ಪಡೆದು ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರಗಳು ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ. ಡಿಸೆಂಬರ್ 30ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶ ಮೈಸೂರು ಜಿಲ್ಲೆ, ಮೈಸೂರು ಇಲ್ಲಿ ಪಡೆಯಬಹುದಾಗಿರುತ್ತದೆ.