ಮೈಸೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಘೋಷಣ್ ಅಭಿಯಾದ ಯೋಜನೆಯ ಅನುಷ್ಠಾನ ಮಾರ್ಗಸೂಚಿಯನ್ವಯ ತಾಲ್ಲೂಕು ಮಟ್ಟದಲ್ಲಿ 3 ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತಾಲ್ಲೂಕು ಸಂಯೋಜಕರ ಹುದ್ದೆಯನ್ನು ತಾತ್ಕಾಲಿಕ ಗೌರವಧನ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು, ಬಿಳಿಗೆರೆ ತಾಲ್ಲೂಕಿನಲ್ಲಿ 1, ಮೈಸೂರು ನಗರ ತಾಲ್ಲೂಕಿನಲ್ಲಿ 1, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 1 ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ 23-05-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-06-2025
ಖಾಲಿ ಇರುವ ಹುದ್ದೆಗಳ ವಿವರ:
ಬಿಳಿಗೆರೆ ತಾಲ್ಲೂಕು ಸಂಯೋಜಕರ ಹುದ್ದೆ – 1
• ಮೈಸೂರು ನಗರ ತಾಲ್ಲೂಕು ಸಂಯೋಜಕರ ಹುದ್ದೆ – 1
- ಪಿರಿಯಾಪಟ್ಟಣ ತಾಲ್ಲೂಕು ಸಂಯೋಜಕರ ಹುದ್ದೆ – 1
ವಿದ್ಯಾರ್ಹತೆ ಹಾಗೂ ವೃತ್ತಿ ಅನುಭವ:
ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್ ಬೆಂಬಲದೊOದಿಗೆ ಕನಿಷ್ಠ 2 ವರ್ಷ ಅನುಭವವನ್ನು ಹೊಂದಿರಬೇಕು.
- ಸ್ಥಳೀಯ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಹೊಂದಿರಬೇಕು, ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ನಿಗಧಿತ ನಮೂನೆಯಲ್ಲಿ ಅರ್ಜಿ, ಎಸ್.ಎಸ್.ಎಲ್.ಸಿ ಅಂಕ ಪಟ್ಟಿ, ಹುದ್ದೆಗೆ ನಿಗಧಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರ, ಭರ್ತಿ ಮಾಡಿದ ಅರ್ಜಿಗಳನ್ನು ಸಂಬoದಿಸಿದ ದಾಖಲೆಗಳನ್ನು ಲಗತ್ತಿಸಿ.
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಭವನ, ಕೃಷ್ಣದೇವರಾಯ ಸರ್ಕಲ್, ವಿಜಯನಗರ 2ನೇ ಹಂತ, ಮೈಸೂರು ಇವರಿಗೆ ಜೂನ್ 10 ರೊಳಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ದೂ.ಸಂ:0821-2495432 ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಮಾಹಿತಿಗಾಗಿ KarnatakahHelp.inಗೆ ಭೇಟಿ ನೀಡಿ.