ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ 2025ನೇ ಸಾಲಿಗೆ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ (ADPM) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇ-ಪಂಚಾಯತ್ ಯೋಜನೆಯಡಿ ಜಿಲ್ಲಾ ಪಂಚಾಯತ್‌ನಲ್ಲಿ ಪ್ರಸ್ತುತ ಖಾಲಿ ಇರುವ ಓರ್ವ(01)ಹುದ್ದೆಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೈಸೂರು ಜಿಲ್ಲಾ ಅಧಿಕೃತ ವೆಬ್ಸೈಟ್ https://mysore.nic.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮೈಸೂರು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಕೇಶ್‌ಕುಮಾರ್ ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – ಜುಲೈ 29, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 12, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ BE(C.S/E&C/I.S)/MCA/BCA) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಉಲ್ಲೇಖಿಸಲಾಗಿರುವುದಿಲ್ಲ.
ಆಯ್ಕೆ ವಿಧಾನ:
ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ (ADPM) ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನ ಹಾಗೂ ಸೇವಾ ಶುಲ್ಕ + ಸೇವಾ ತೆರಿಗೆ ಪ್ರತ್ಯೇಕವಾಗಿ ನೀಡಲಾಗುತ್ತದೆ.
How to Apply for Mysore Zilla panchayat Recruitment 2025
ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;
ಮೈಸೂರು ಜಿಲ್ಲಾ ಅಧಿಕೃತ ವೆಬ್ಸೈಟ್ https://mysore.nic.in/ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ *ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ನೇಮಕಾತಿ* ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ *Click here to Apply* ಲಿಂಕ್ ಮೇಲೆ ಟ್ಯಾಪ್ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.