ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 252 ಪೌರಕಾರ್ಮಿಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಅಥವಾ ಕ್ಷೇಮಾಭಿವೃದ್ಧಿ ನಿಯಮದ ಅಡಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನದ ಅಡಿಯಲ್ಲಿ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಪಾಲಿಕೆಯ ಆಯುಕ್ತರಿಗೆ ಸಲ್ಲಿಸಬೇಕು.
Shortview of Mysuru City Corporation Recruitment 2024
Organization Name – Mysuru City Corporation Post Name – Pourakarmikas Total Vacancy – 252 Application Process: Offline Job Location – Mysuru
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 18 ಜೂನ್ 2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18 ಜುಲೈ 2024
ಅರ್ಹತೆಗಳು:
ಆರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆ ಅನ್ವಯವಾಗುವುದಿಲ್ಲ
ಕನ್ನಡ ಮಾತನಾಡಲು ಬರಬೇಕು
ವಯೋಮಿತಿ:
18 ವರ್ಷ ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.
ವೇತನ ಶ್ರೇಣಿ:
17,000 ದಿಂದ 28, 950 ರೂಗಳು ಮಾಸಿಕ ವೇತನ ನೀಡಲಾಗುತ್ತದೆ.
How to Apply for Mysuru City Corporation Notification 2024
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಧಿಸೂಚನೆಯ ಪ್ರತಿ ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಸಲ್ಲಿಸಬೇಕು.
ಕಚೇರಿಯ ವಿಳಾಸ:
ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಯ್ಯಾಜಿ ರಾವ್ ರಸ್ತೆ, ಮೈಸೂರು-57004