ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(NABARD) ತನ್ನ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿ ಇರುವ ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸೇರಿದಂತೆ 25 ಪ್ರಾದೇಶಿಕ ಕಚೇರಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅಭಿವೃದ್ಧಿ ಸಹಾಯಕ(159) ಹಾಗೂ ಅಭಿವೃದ್ಧಿ ಸಹಾಯಕ – ಹಿಂದಿ (03) ಸೇರಿ ಒಟ್ಟು 162 ಪದವೀಧರ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಫೆ.03 ರೊಳಗೆ ಐಬಿಪಿಎಸ್ನ ಅಧಿಕೃತ ಜಾಲತಾಣ https://ibpsreg.ibps.in/nabhindec25/ದ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 03, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಕೇಂದ್ರ/ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 50% ಅಂಕಗಳೊಂದಿಗೆಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಸಮಾನ ಅರ್ಹತೆಯನ್ನು ಹೊಂದಿರಬೇಕು.
ಅಭಿವೃದ್ಧಿ ಸಹಾಯಕ(ಹಿಂದಿ) ಹುದ್ದೆಗೆ- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿ ಮಾಧ್ಯಮದಲ್ಲಿ ಪದವಿ ಪಡೆದಿರಬೇಕು ಹಾಗೂ ಇಂಗ್ಲಿಷ್ನಿಂದ ಹಿಂದಿಗೆ ಮತ್ತು ಹಿಂದಿಯಿಂದ ಇಂಗ್ಲಿಷ್ಗೆ ಅನುವಾದಿಸಲು ತಿಳಿದಿರಬೇಕು.
ಅಭ್ಯರ್ಥಿಗಳು ಕಂಪ್ಯೂಟರ್ (PC)ನಲ್ಲಿ ವರ್ಡ್ ಪ್ರೊಸೆಸಿಂಗ್ ಬಳಸುವ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು