ಪದವೀಧರರಿಗೆ ನಬಾರ್ಡ್‌ನಲ್ಲಿ ಉದ್ಯೋಗಾವಕಾಶ

ಫೆ.03ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

Published on:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌(NABARD) ತನ್ನ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿ ಇರುವ ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಸೇರಿದಂತೆ 25 ಪ್ರಾದೇಶಿಕ ಕಚೇರಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅಭಿವೃದ್ಧಿ ಸಹಾಯಕ(159) ಹಾಗೂ ಅಭಿವೃದ್ಧಿ ಸಹಾಯಕ – ಹಿಂದಿ (03) ಸೇರಿ ಒಟ್ಟು 162 ಪದವೀಧರ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಫೆ.03 ರೊಳಗೆ ಐಬಿಪಿಎಸ್‌ನ ಅಧಿಕೃತ ಜಾಲತಾಣ https://ibpsreg.ibps.in/nabhindec25/ದ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 17, 2026
  • ಅರ್ಜಿ ಸಲ್ಲಿಸಲು‌ ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 03, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಕೇಂದ್ರ/ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 50% ಅಂಕಗಳೊಂದಿಗೆಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಸಮಾನ ಅರ್ಹತೆಯನ್ನು ಹೊಂದಿರಬೇಕು.

ಅಭಿವೃದ್ಧಿ ಸಹಾಯಕ(ಹಿಂದಿ) ಹುದ್ದೆಗೆ- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲೀಷ್‌ ಅಥವಾ ಹಿಂದಿ ಮಾಧ್ಯಮದಲ್ಲಿ ಪದವಿ ಪಡೆದಿರಬೇಕು ಹಾಗೂ ಇಂಗ್ಲಿಷ್‌ನಿಂದ ಹಿಂದಿಗೆ ಮತ್ತು ಹಿಂದಿಯಿಂದ ಇಂಗ್ಲಿಷ್‌ಗೆ ಅನುವಾದಿಸಲು ತಿಳಿದಿರಬೇಕು.

ಅಭ್ಯರ್ಥಿಗಳು ಕಂಪ್ಯೂಟರ್ (PC)ನಲ್ಲಿ ವರ್ಡ್ ಪ್ರೊಸೆಸಿಂಗ್ ಬಳಸುವ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

01-01-2026 ರಂತೆ;

ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು

ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10-15 ವರ್ಷಗಳು.

ಆಯ್ಕೆ ವಿಧಾನ:

  • ಪೂರ್ವ ಪರೀಕ್ಷೆ (ಆನ್‌ಲೈನ್‌)
  • ಮುಖ್ಯ ಪರೀಕ್ಷೆ(ಆನ್‌ಲೈನ್‌)
  • ಭಾಷಾ ಪ್ರಾವೀಣ್ಯತೆ ಪರೀಕ್ಷೆ
  • ಅಂತಿಮ ಮೆರಿಟ್ ಪಟ್ಟಿ

ಸಂಬಳ:

ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ₹46,500 ವೇತನ ಹಾಗೂ ಇತರ ಭತ್ಯೆಗಳನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಪ.ಜಾತಿ, ಪ. ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 100ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ – 550ರೂ.

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ:

• IBPSನ ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/nabhindec25/ಗೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ನೋಂದಣಿ, ಸಂಖ್ಯೆ ಪಾಸ್ವರ್ಡ್ ಹಾಗೂ ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.

• ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಮೂಲ ಮಾಹಿತಿಗಳನ್ನು ನಮೂದಿಸಿ.

• ಮುಂದುವರೆದಂತೆ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.nabard.org
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment