NABARD ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ, ಬಿಹಾರ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 14, 2025 ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ಲಭ್ಯವಿರುವ ಹುದ್ದೆಗಳು:
ಅಧಿಸೂಚನೆಯಲ್ಲಿ ಲಭ್ಯವಿರುವ ಹುದ್ದೆಗಳ ಕುರಿತು ಯಾವುದೇ ಮಾಹಿತಿ ನೀಡಿರುವುದಿಲ್ಲ.
ವಯೋಮಿತಿ ಸಡಿಲಿಕೆ:
NABARD ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯಲ್ಲಿ ಹುದ್ದೆಗೆ ವಯೋಮಿತಿ ಮತ್ತು ಸಡಿಲಿಕೆಯ ಕುರಿತು ಯಾವುದೇ ಮಾಹಿತಿ ನೀಡಿರುವುದಿಲ್ಲ.
ಅರ್ಜಿ ಶುಲ್ಕ:
ಅಪ್ರೆಂಟಿಸ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ ?
NABARD ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಯಾವುದೇ ಅನುಭವ ಇತ್ಯಾದಿ ದಾಖಲೆಗಳ ಪ್ರತಿಯನ್ನು ತಯಾರಿಸಿಟ್ಟುಕೊಳ್ಳಿ.
ಅಪ್ರೆಂಟಿಸ್ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಲು (ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ).
Nabfins Apprentice Application Form
ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
ಆನ್ಲೈನ್ ಅರ್ಜಿ ಫಾರಂನಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಪೂರೈಸಿದ ನಂತರ ಎಲ್ಲವು ಸರಿಯಾಗಿದೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿಕೊಂಡು ಸಂಪೂರ್ಣ ವಿವರದ ಪ್ರಿಂಟ್ ತೆಗೆದುಕೊಳ್ಳಿ ಮತ್ತು ಅಪ್ಲಿಕೇಶನ್ ಸಲ್ಲಿಸಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಸಂಖ್ಯೆಯನ್ನು ಸೆರೆಹಿಡಿಯಿರಿ.
ಪ್ರಿಂಟ್ ತೆಗೆದಿಟ್ಟುಕೊಳ್ಳಲಾದ ಅರ್ಜಿ ತುಂಬಿದ ಪ್ರತಿಯನ್ನು careers@nabfins.org ಗೆ ಕಳುಹಿಸಿಕೊಡಲು ತಿಳಿಸಲಾಗಿದೆ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.