ಬೆಂಗಳೂರು ನಗರ ಜಿಲ್ಲೆಯ PM-ABHIM ಯೋಜನೆಯಡಿ ನಮ್ಮ ಕ್ಲಿನಿಕ್‌ಗಳಿಗೆ ಹೊಸದಾಗಿ ಅನುಮೋದನೆಯಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ.
ವೈದ್ಯಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು ಹಾಗೂ ಪ್ರಯೋಗಶಾಲಾ ತಂತ್ರಜ್ಞ ಒಟ್ಟು 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನಿಯಾಮಾನುಸಾರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Highlights of Employment News
Organization Name – District Health and Family Welfare Society (DHFWS) Post Name – Various Posts Total Vacancy – 48 Application Process – Offline Job Location – Bengaluru
ನೇರ ಸಂದರ್ಶನ ನಡೆಯುವ ದಿನಾಂಕ 19-05-2025 ಅಭ್ಯರ್ಥಿಗಳು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ನಡೆಯುವ ಸ್ಥಳದಲ್ಲಿ ಹಾಜರಿರಬೇಕು.
ಖಾಲಿ ಇರುವ ಹುದ್ದೆಗಳ ವಿವರ:
ವೈದ್ಯಾಧಿಕಾರಿ ಹುದ್ದೆ – 19
ಶುಶ್ರೂಷಣಾಧಿಕಾರಿ ಹುದ್ದೆ – 16
ಪ್ರಯೋಗಶಾಲಾ ತಂತ್ರಜ್ಞರ ಹುದ್ದೆ – 13
ಶೈಕ್ಷಣಿಕ ಅರ್ಹತೆ:
• ವೈದ್ಯಾಧಿಕಾರಿ ಹುದ್ದೆಗೆ – ಎಂಬಿಬಿಎಸ್ ಉತ್ತೀರ್ಣರಾಗಿ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.
• ಶುಶ್ರೂಷಣಾಧಿಕಾರಿ ಹುದ್ದೆಗೆ – ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್ಸಿ / ಜಿಎನ್ಎಂ ತರಬೇತಿ ಹಾಗೂ ಕೆಎನ್‌ಸಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ – ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣ ಹೊಂದಿರಬೇಕು.
• ದ್ವಿತೀಯ ಪಿ.ಯು.ಸಿಯಲ್ಲಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣ ರಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 2 ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣ ಪಡೆದಿರಬೇಕು.
• ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯನ್ನು ಹೊಂದಿರಬೇಕು.
ವೇತನ:
ವೈದ್ಯಾಧಿಕಾರಿ ಹುದ್ದೆ – 60000/-
ಶುಶ್ರೂಷಣಾಧಿಕಾರಿ ಹುದ್ದೆ – 18,714/-
ಪ್ರಯೋಗಶಾಲಾ ತಂತ್ರಜ್ಞರ ಹುದ್ದೆ – 14,515/-
ಆಯ್ಕೆ ವಿಧಾನ:
ಆಯ್ಕೆಯು / ನೇಮಕಾತಿಯು ಎನ್ ಯು ಹೆಚ್ ಎಂ ಮಾರ್ಗಸೂಚಿಗಳಂತೆ ರೋಸ್ಟರ್ ಕಮ್ ಮೇರಿಟ್ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುವುದು.
ಈ ಗುತ್ತಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಮೀಸಲಾತಿ ಅಭ್ಯರ್ಥಿಗಳು ದೊರೆಯದೇ ಇರುವ ಸಂದರ್ಭದಲ್ಲಿ ಮಾತ್ರ ಸಾಮಾನ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆಯಾದರೂ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.
ನೇರ ಸಂದರ್ಶನಕ್ಕೆ ಕೊಂಡೊಯ್ಯಬೇಕಾದ ಅಗತ್ಯ ದಾಖಲೆಗಳು
ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.
ನೇರ ಸಂದರ್ಶನ ನಡೆಯುವ ಸ್ಥಳ
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ, ಹಳೇ ಟಿ.ವಿ ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕನಂದ ಮೇಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು-38