ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಒಳಪಟ್ಟಿರುವ ನ್ಯಾಷನಲ್ ಹೌಸಿಂಗ್ ಬ್ಯಾಂಕ್(NHB)ನಲ್ಲಿ ನಿಯಮಿತ ಮತ್ತು ಗುತ್ತಿಗೆ ಆಧಾರದಡಿ ಒಟ್ಟು 10 ಅಧಿಕಾರಿ(Officer) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.
ಉಪ ಪ್ರಧಾನ ವ್ಯವಸ್ಥಾಪಕರು, ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ನಿಯಮಿತವಾಗಿ ಹಾಗೂ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ, ಕಲಿಕೆ ಮತ್ತು ಅಭಿವೃದ್ಧಿ- ಮುಖ್ಯಸ್ಥ ಹಾಗೂ ಹಿರಿಯ ತೆರಿಗೆ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು NHB ಅಧಿಕೃತ ಜಾಲತಾಣ https://recruitment.nhbonline.org.in/Registrationಕ್ಕೆ ಭೇಟಿ ನೀಡಿ. ನವೆಂಬರ್ 28 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ನವೆಂಬರ್ 28, 2025
ಹುದ್ದೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ:
• ಉಪ ಪ್ರಧಾನ ವ್ಯವಸ್ಥಾಪಕರು (ಕ್ರೆಡಿಟ್ ಮಾನಿಟರಿಂಗ್) (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA / MBA / PGDM / PGDBM ಪೂರ್ಣಗೊಳಿಸಿರಬೇಕು.
• ಉಪ ಪ್ರಧಾನ ವ್ಯವಸ್ಥಾಪಕರು (ಸುಸ್ಥಿರ ಹಣಕಾಸು) (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA / MBA / PGDM / PGDBM ಪೂರ್ಣಗೊಳಿಸಿರಬೇಕು.
✓ ಸಹಾಯಕ ಜನರಲ್ ಮ್ಯಾನೇಜರ್(01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿಪದವಿಯೊಂದಿಗೆ CA/ಕಾಸ್ಟ್ ಮ್ಯಾನೇಜ್ಮೆಂಟ್ ಮತ್ತು ಅಕೌಂಟೆಂಟ್/ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್/ಎಂಬಿಎ (ಹಣಕಾಸು)/ ಸಮಾನ ಅರ್ಹತೆ ಅಥವಾ GARP ನಿಂದ FRM/ PRM ನಿಂದ PRMIA ಪೂರ್ಣಗೊಳಿಸಿರಬೇಕು.
✓ ಸಹಾಯಕ ಮ್ಯಾನೇಜರ್(02) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಚಾರ್ಟರ್ಡ್ ಅಕೌಂಟೆಂಟ್ (CA) ಪೂರ್ಣಗೊಳಿಸಿರಬೇಕು.
✓ ಸಹಾಯಕ ವ್ಯವಸ್ಥಾಪಕ (ಕಲಿಕೆ ಅಭಿವೃದ್ಧಿ) (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBA / PGDM / PGDBM ಪೂರ್ಣಗೊಳಿಸಿರಬೇಕು.
✓ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ MCA ಪದವಿ ಪೂರ್ಣಗೊಳಿಸಿರಬೇಕು.
✓ ಮುಖ್ಯಸ್ಥ (ಕಲಿಕೆ ಮತ್ತು ಅಭಿವೃದ್ಧಿ) (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಚಾರ್ಟರ್ಡ್ ಅಕೌಂಟೆಂಟ್/ವೆಚ್ಚ ಮತ್ತು ನಿರ್ವಹಣಾ ಅಕೌಂಟೆಂಟ್/ಕಂಪನಿ ಕಾರ್ಯದರ್ಶಿ/ಎಂಬಿಎ/ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ ಹಿರಿಯ ತೆರಿಗೆ ಅಧಿಕಾರಿ (02) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಚಾರ್ಟರ್ಡ್ ಅಕೌಂಟೆಂಟ್ (CA) ಪೂರ್ಣಗೊಳಿಸಿರಬೇಕು.
ವಯೋಮಿತಿ:
01-10-2025 ರಂತೆ;
✓ ಉಪ ಪ್ರಧಾನ ವ್ಯವಸ್ಥಾಪಕರ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 40 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
✓ ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 36 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
✓ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
✓ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 40 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
✓ ಮುಖ್ಯಸ್ಥ ಕಲಿಕೆ ಮತ್ತು ಅಭಿವೃದ್ಧಿ ಹುದ್ದೆಗಳಿಗೆ;
ಗರಿಷ್ಠ ವಯಸ್ಸಿನ ಮಿತಿ – 62 ವರ್ಷಗಳು
✓ ಹಿರಿಯ ತೆರಿಗೆ ಅಧಿಕಾರಿ ಹುದ್ದೆಗಳಿಗೆ;
ಗರಿಷ್ಠ ವಯಸ್ಸಿನ ಮಿತಿ – 62 ವರ್ಷಗಳು
ಆಯ್ಕೆ ವಿಧಾನ:
ಕಿರುಪಟ್ಟಿ
ಆನ್ಲೈನ್ ಪರೀಕ್ಷೆ (ಸಹಾಯಕ ವ್ಯವಸ್ಥಾಪಕ-ಜೆಎಂಜಿ ಸ್ಕೇಲ್-1 ಹುದ್ದೆಗೆ ಮಾತ್ರ)
ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,480ರೂ. – ಗಳಿಂದ 1,56,500ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 175ರೂ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ – 850ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• NHB ಅಧಿಕೃತ ಜಾಲತಾಣ https://recruitment.nhbonline.org.in/Registrationಕ್ಕೆ ಭೇಟಿ ನೀಡಿ.
• ಬಳಿಕ ಅಭ್ಯರ್ಥಿ ಲಾಗಿನ್ ವಿಭಾಗಕ್ಕೆ ತೆರಳಿ ಅರ್ಜಿದಾರರು ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಲಾಗಿನ್ ಆದ ನಂತರ ಅರ್ಜಿಯಲ್ಲಿ ಕೇಳಲಾಗುವ ಮೂಲ ಮಾಹಿತಿಗಳನ್ನು ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.