ಕೊಚ್ಚಿಯ ನೌಕಾ ಹಡಗು ದುರಸ್ತಿ ಯಾರ್ಡ್(NSRY) ಹಾಗೂ ನಾವೆಲ್ ಏರ್ ಕ್ರಾಫ್ಟ್ ಯಾರ್ಡ್(NAY)ನಲ್ಲಿ ಅಪ್ರೆಂಟಿಸ್ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಕಂಪ್ಯೂಟರ್ ಆಪರೇಷನ್ ಆಫ್ ಪ್ರೋಗ್ರಾಮಿಂಗ್, ಅಸಿಸ್ಟೆಂಟ್, ಎಲೆಕ್ಟ್ರಿಷಿಯನ್, ಫಿಟ್ಟರ್ ಹಾಗೂ ಮೆಕ್ಯಾನಿಕ್ ಸೇರಿದಂತೆ ವಿವಿಧ ಟ್ರೇಡ್ಗಳಿಗೆ ಒಟ್ಟು 240 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಏ.03ರೊಳಗೆ ತಲುಪಿಸಬೇಕು.
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ ಮೆಟ್ರಿಕ್/10ನೇ ತರಗತಿ ಉತ್ತೀರ್ಣ ಮತ್ತು ಒಟ್ಟು 65% ಅಂಕಗಳೊಂದಿಗೆ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.ಅಭ್ಯರ್ಥಿಗಳು (ತಾತ್ಕಾಲಿಕ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ) ಹೊಂದಿದ್ದಲ್ಲಿ ಸ್ವೀಕರಿಸಲಾಗುತ್ತದೆ.
ವಯೋಮಿತಿ:
01-06-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಶಾರ್ಟ್ಲಿಸ್ಟ್
ಸಂದರ್ಶನ
ವೈದ್ಯಕೀಯ ಪರೀಕ್ಷೆ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಟ್ರೇಡ್ ಗಳಿಗೆ ಅನುಗುಣವಾಗಿ ಸರ್ಕಾರವು ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಅಡಿಯಲ್ಲಿ ನಿಗದಿಪಡಿಸಲಾದ ಸ್ಟೈಫಂಡ್ ಮೊತ್ತವನ್ನು ಪಾವತಿಸಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ.?
• ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.
• ಏಪ್ರಿಲ್ 03 ರೊಳಗೆ ಈ ಕೆಳಗಿನ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು.
ವಿಳಾಸ: ಅಡ್ಮಿರಲ್ ಸೂಪರಿಂಟೆಂಡೆಂಟ್ (ಎಟಿಎಸ್ನ ಉಸ್ತುವಾರಿ ಅಧಿಕಾರಿಗಾಗಿ), ಅಪ್ರೆಂಟಿಸ್ ತರಬೇತಿ ಶಾಲೆ, ನೌಕಾ ಹಡಗು ದುರಸ್ತಿ ಯಾರ್ಡ್, ನೌಕಾ ನೆಲೆ, ಕೊಚ್ಚಿ-682004