Navy SSC Executive IT Officer Recruitment 2024: ಭಾರತೀಯ ನೌಕಾಪಡೆಯಲ್ಲಿ SSC IT ಅಧಿಕಾರಿಗಳ ಹುದ್ದೆಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಭಾರತೀಯ ನೌಕಾಪಡೆಯು SSC ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 18 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು MCA ಜೊತೆಗೆ BCA/ B.Sc ಪದವಿಯಲ್ಲಿ ಶೇಕಡ 60ರಷ್ಟು ಅಂಕಗಳೊಂದಿಗೆ ಪಾಸ್ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತೀಯ ನೌಕಾಪಡೆಯ ಅಧಿಕೃತ www.joinindiannavy.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ Navy SSC Executive IT Officer Recruitment 2024 ನೇಮಕಾತಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Navy SSC Executive IT Officer Recruitment 2024
Organization Name – Indian Navy Post Name – Navy SSC Executive (IT) Officer Total Vacancy – 18 Application Process: Online Job Location – All Over India
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಆಗಸ್ಟ್ 2, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 16, 2024
ವಿದ್ಯಾರ್ಹತೆ:
M.Sc./ BE/BTech./ M.Tech (ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮಾಹಿತಿ ತಂತ್ರಜ್ಞಾನ/ ಸಾಫ್ಟ್‌ವೇರ್ ಸಿಸ್ಟಮ್ಸ್/ ಸೈಬರ್ ಸೆಕ್ಯುರಿಟಿ/ ಸಿಸ್ಟಮ್ ಅಡ್ಮಿನಿಸ್ಟ್ರೇಷನ್ & ನೆಟ್‌ವರ್ಕಿಂಗ್/ ಕಂಪ್ಯೂಟರ್ ಸಿಸ್ಟಮ್ಸ್ & ನೆಟ್‌ವರ್ಕಿಂಗ್/ ಡೇಟಾ ಅನಾಲಿಟಿಕ್ಸ್/ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್),
ಅಥವಾ
MCA ಜೊತೆಗೆ BCA/ B.Sc. (ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ)
ವಯಸ್ಸಿನ ಮಿತಿ:
ಕನಿಷ್ಠ ವಯಸ್ಸು : 19 ವರ್ಷಗಳು
ಗರಿಷ್ಠ ವಯಸ್ಸು : 24 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಶಾರ್ಟ್‌ಲಿಸ್ಟಿಂಗ್: ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ಮಾನದಂಡಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಸಂದರ್ಶನ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸೇವೆಗಳ ಆಯ್ಕೆ ಮಂಡಳಿ (SSB) ಸಂದರ್ಶನಕ್ಕೆ ಕರೆಯಲಾಗುವುದು, ಇದರಲ್ಲಿ ಮಾನಸಿಕ ಪರೀಕ್ಷೆಗಳು, ಗುಂಪು ಕಾರ್ಯಗಳು ಮತ್ತು ವೈಯಕ್ತಿಕ ಸಂದರ್ಶನಗಳನ್ನು ನಡೆಸಲಾಗುತ್ತದೆ.
ವೈದ್ಯಕೀಯ ಪರೀಕ್ಷೆ: SSB ಸಂದರ್ಶನದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ.
ಅಂತಿಮ ಮೆರಿಟ್ ಪಟ್ಟಿ: ಆಯ್ಕೆಯು SSB ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಂತಿಮ ಮೆರಿಟ್ ಪಟ್ಟಿಯಲ್ಲಿ ಪ್ರಕಟಿಸಲಾಗುತ್ತದೆ.
ಅರ್ಜಿ ಶುಲ್ಕ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
How to Apply for Navy SSC Executive IT Officer Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಮೊದಲಿಗೆ joinindiannavy.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ NEWS ವಿಭಾಗದಲ್ಲಿ Navy SSC Executive IT Officer Recruitment 2024 “Apply online” ಲಿಂಕ್ ಅನ್ನು ಕ್ಲಿಕ್ ಮಾಡಿ, ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ನಂತರ ಲಾಗಿನ್ ಮಾಡಿ ಮತ್ತು ನೌಕಾಪಡೆಯ SSC IT ಅಧಿಕಾರಿ ಆನ್‌ಲೈನ್ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ .
ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
ಅರ್ಜಿ ನಮೂನೆಯನ್ನು ಸಲ್ಲಿಸಿ.
Important Direct Links:
SSC (IT) Entry Jan 2025 Official Notification PDF(Dated on 02/08/2024)