ಪ್ರಸಕ್ತ ಸಾಲಿಗೆ ನೇಕಾರ್ ಸಮ್ಮಾನ್ ಯೋಜನೆ(Nekar Samman Scheme)ಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಂಭಂದಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಆರ್ಥಿಕ ನೆರವು ನೀಡಲು ಮೈಸೂರು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳನ್ನು ನಡೆಸುವ (ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ, ಮಗ್ಗ ಪೂರ್ವ ಘಟಕಗಳ ನೇಕಾರರು ಹಾಗೂ ಕಾರ್ಮಿಕರಿಗೆ) ವಾರ್ಷಿಕವಾಗಿ ಆರ್ಥಿಕ ನೆರವನ್ನು ನೀಡಲು ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಪ್ರಕಟಣೆಯ ದಿನಾಂಕ – ಜುಲೈ 24, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 15, 2025
ಈ ಯೋಜನೆಯಡಿ ಯಾರು ಅರ್ಜಿ ಸಲ್ಲಿಸುವಂತಿಲ್ಲ?
ಈ ಯೋಜನೆಯಡಿ 2024-25ನೇ ಸಾಲಿನಲ್ಲಿ ಈಗಾಗಲೇ ಸೌಲಭ್ಯ ಪಡೆದಿರುವ, ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಮೃತರ (ಪರವಾಗಿ), ನೇಕಾರಿಕೆ ವೃತ್ತಿ ಬಿಟ್ಟಿರುವ ಹಾಗೂ ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರರು ಅರ್ಜಿ ಸಲ್ಲಿಸುವಂತಿಲ್ಲ.
ಈ ಯೋಜನೆಯಡಿ ಯಾರು ಅರ್ಜಿ ಸಲ್ಲಿಸಬಹುದು?
ನೇಕಾರ್ ಸಮ್ಮಾನ್ ಯೋಜನೆಯಡಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಮತ್ತು 2025-26ನೇ ಸಾಲಿನ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ (ಪಿಎಂಜೆಜೆಬಿವೈ) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ (ಪಿಎಂಎಸ್‌ಬಿವೈ) ನೋಂದಣಿಯಾಗಿರುವ ಕೈಮಗ್ಗ ನೇಕಾರರು ಅರ್ಜಿ ಸಲ್ಲಿಸಬಹುದು.
ಕಳೆದ ಸಾಲಿನಲ್ಲಿ ನೋಂದಣಿಯಾಗದೇ ಇರುವ, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಅರ್ಜಿ ಸಲ್ಲಿಸಬಹುದು.
ಆರ್ಥಿಕ ಸಹಾಯಧನದ ಮೊತ್ತ:
ನೇಕಾರರಿಗೆ ವಾರ್ಷಿಕವಾಗಿ 5,000 ರೂ. ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ನೇಕಾರರ ಗುರುತಿನ ಚೀಟಿ
- ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಫೋಟೋ ಪ್ರತಿ
How to Apply for Nekar Samman Scheme Financial Assistance?
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಸ್ಥಳೀಯ ಕೈಮಗ್ಗ ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ಕಛೇರಿಯ ಆವರಣದಲ್ಲಿರುವ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಚಾಮರಾಜೇಂದ್ರ ತಾಂತ್ರಿಕ ವಿದ್ಯಾ ಸಂಸ್ಥೆ,(ಸಿಟಿಐ ಕಟ್ಟಡ), ಸಯ್ಯಾಜಿ ರಾವ್ ರಸ್ತೆ, ಮೈಸೂರು-01 ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಈ ವಿಳಾಸದಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ- 0821-2441353ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
Official Website | www.karnatakadht.org |
More Updates | KarnatakaHelp.in |