ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ತರಬೇತಿ ನೀಡಲು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒಟ್ಟು 21 ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಬರವಣಿಗೆಯಲ್ಲಿ ಪರಿಣಿತಿ ಹೊಂದಿರುವ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ನ.15ರೊಳಗೆ https://forms.gle/Qth3f5FjMHXSxTB68 ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಹೊರಡಿಸಿದ ಪ್ರಕಟಣೆ ತಿಳಿಸಿದೆ.
ವರ್ಗವಾರು ಅಭ್ಯರ್ಥಿಗಳಿಗೆ ನೀಡಲಾಗುವ ಇಂಟರ್ನ್ಶಿಪ್ ವಿವರ:
ಮಹಿಳಾ ಆಯವ್ಯಯದಡಿ – 08 ಮಹಿಳಾ ಅಭ್ಯರ್ಥಿಗಳಿಗೆ, ಪರಿಶಿಷ್ಟ ಜಾತಿ ಉಪಯೋಜನೆಯಡಿ – 09 ಪ.ಜಾತಿಯ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ – 04 ಪ.ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು.
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳಿಗೆ ಗಮನಕ್ಕೆ: ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿಯ ಅವಧಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಅವಧಿಯವರೆಗೆ ತರಬೇತಿಯನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಟೈಪಂಡ್ ಮೊತ್ತ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000ರೂ. ಸ್ಟೈಪಂಡ್ ನೀಡಲಾಗುವುದು ಹಾಗೂ ಇಂಟರ್ನ್ಶಿಪ್ ತರಬೇತಿ ನೀಡುವ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
• ಇಂಟರ್ನ್ಶಿಪ್ ಅರ್ಜಿ 2025 ಗೂಗಲ್ ಫಾರ್ಮ್ https://forms.gle/Qth3f5FjMHXSxTB68ಗೆ ಭೇಟಿ ನೀಡಿ.
• ನಂತರ ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae)ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
• ಪೂರಕ ದಾಖಲೆಗಳೊಂದಿಗೆ ಇಂಟರ್ನ್ಶಿಪ್ ಅರ್ಜಿ 2025 ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.
• ಅರ್ಜಿ ಸಲ್ಲಿಸಲು 2025ರ ನವೆಂಬರ್ 15 ಕೊನೆಯ ದಿನವಾಗಿದೆ.