ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆ (DOS)ಯಡಿ ಬರುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್(NSIL)ನಲ್ಲಿ ಯೋಜನಾ ವಿಜ್ಞಾನಿ, ಯೋಜನಾ ಎಂಜಿನಿಯರ್ ಹಾಗೂ ಯೋಜನಾ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 47 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ.30ರೊಳಗೆ ಅರ್ಜಿ ಸಲ್ಲಿಸಲು NSIL ಅಧಿಕೃತ ವೆಬ್ಸೈಟ್ https://www.nsilindia.co.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ನವೆಂಬರ್ 06, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 30, 2025
ಹುದ್ದೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ:
✓ ಯೋಜನಾ ವಿಜ್ಞಾನಿ (22) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ (ಕೃಷಿ, ಪರಿಸರ, ಜಿಯೋಸ್ಪೇಷಿಯಲ್) ಅಥವಾ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ (ರಿಮೋಟ್ ಸೆನ್ಸಿಂಗ್/ಜಿಐಎಸ್/ಜಿಯೋಇನ್ಫರ್ಮ್ಯಾಟಿಕ್ಸ್/ಕೃಷಿ ಎಂಜಿನಿಯರಿಂಗ್/ಸಿವಿಲ್ ಎಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
✓ ಪ್ರಾಜೆಕ್ಟ್ ಎಂಜಿನಿಯರ್ (15) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಬಿ.ಟೆಕ್/ಬಿಇ ಜೊತೆಗೆ ಏವಿಯೋನಿಕ್/ಲಾಂಚ್ ವೆಹಿಕಲ್ ಸಿಸ್ಟಮ್ಗಳ ಪರೀಕ್ಷೆ ಮತ್ತು ಮೌಲ್ಯಮಾಪನ/QA ನಲ್ಲಿ 1 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.
✓ ಯೋಜನಾ ಸಹಾಯಕ (10) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಜೊತೆಗೆ ಏವಿಯೋನಿಕ್/ಲಾಂಚ್ ವೆಹಿಕಲ್ ಸಿಸ್ಟಮ್ಗಳ ಪರೀಕ್ಷೆ ಮತ್ತು ಮೌಲ್ಯಮಾಪನ/QA ನಲ್ಲಿ 1 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
31-10-2025 ರಂತೆ;
✓ ಯೋಜನಾ ವಿಜ್ಞಾನಿ ಹುದ್ದೆಗಳಿಗೆ;
ಯು.ಆರ್ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 43 ವರ್ಷಗಳು
ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – GOI ಮಾರ್ಗಸೂಚಿಗಳ ಪ್ರಕಾರ
✓ ಪ್ರಾಜೆಕ್ಟ್ ಎಂಜಿನಿಯರ್ ಹಾಗೂ ಯೋಜನಾ ಸಹಾಯಕರ ಹುದ್ದೆಗಳಿಗೆ;
ಯು.ಆರ್ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು
ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – GOI ಮಾರ್ಗಸೂಚಿಗಳ ಪ್ರಕಾರ
ವಯೋಮಿತಿ ಸಡಿಲಿಕೆ: ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ -05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ -10 ರಿಂದ 15 ವರ್ಷಗಳು
ಆಯ್ಕೆ ಪ್ರಕ್ರಿಯೆ:
ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ 30,000ರೂ.-72,800ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಯೋಜನಾ ವಿಜ್ಞಾನಿ – ರೂ.72,800 ಪ್ರ.ತಿಂಗಳು
ಪ್ರಾಜೆಕ್ಟ್ ಎಂಜಿನಿಯರ್ – ರೂ.60,000 ಪ್ರ.ತಿಂಗಳು
ಯೋಜನಾ ಸಹಾಯಕ – ರೂ.30,000 ಪ್ರ.ತಿಂಗಳು
ಅರ್ಜಿ ಶುಲ್ಕ:
• ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
• ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 250ರೂ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
• NSIL ಅಧಿಕೃತ ವೆಬ್ ಸೈಟ್ https://www.nsilindia.co.in/ಗೆ ಭೇಟಿ ನೀಡಿ.
• ಬಳಿಕ ವೃತ್ತಿ ಜೀವನ ವಿಭಾಗಕ್ಕೆ ಹೋಗಿ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.nsilindia.co.in |
| More Updates | KarnatakaHelp.in |


