ಭಾರತ ಸರ್ಕಾರದ ಗೃಹ ಸಚಿವಾಲಯದ ಆಶ್ರಯದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವು ವಿವಿಧ ವೈಜ್ಞಾನಿಕ/ತಾಂತ್ರಿಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಕೆ ಆಹ್ವಾನಿಸಿದೆ.
ವಿವಿಧ ವೃಂದಗಳಲ್ಲಿ ಸೀನಿಯರ್ ಸೈಂಟಿಫಿಕ್ ಆಫೀಸರ್(02), ಜೂನಿಯರ್ ಸೈಂಟಿಫಿಕ್ ಆಫೀಸರ್(03), ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್(01) ಹಾಗೂ ಲ್ಯಾಬೋರೇಟರಿ ಅಸಿಸ್ಟೆಂಟ್(24) ಸೇರಿದಂತೆ ಒಟ್ಟು 30 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು 2026ರ ಜ.8ರೊಳಗೆ ಸಮರ್ಥ ಪೋರ್ಟಲ್ https://nfsunt.samarth.edu.in/index.php/site/login ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಪಿ.ಎಚ್.ಡಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
✓ ಸೀನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
✓ ಜೂನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
✓ ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
✓ ಪ್ರಯೋಗಾಲಯ ಸಹಾಯಕ ಹುದ್ದೆಗಳಿಗೆ ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸನಮಿತಿ – 27 ವರ್ಷಗಳು
ವಯೋಮಿತಿ ಸಡಿಲಿಕೆ; ಸರ್ಕಾರಿ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ, ಅಂಗವಿಕಲ ಮತ್ತು ಮಾಜಿ ಸೈನಿಕ ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಸ್ಕ್ರೀನಿಂಗ್ ಪರೀಕ್ಷೆ ಸಂದರ್ಶನ ದಾಖಲೆ ಪರಿಶೀಲನೆ
ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಪ್ರಕ್ರಿಯೆ ಇರುತ್ತದೆ.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ (5ನೇ ಹಾಗೂ 10ನೇ CPC ಪೇ ಮ್ಯಾಟ್ರಿಕ್ಸ್) ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಹಾಗೂ ಎಂ.ಎಸ್.ಪಿ ಅಭ್ಯರ್ಥಿಗಳಿಗೆ – 500ರೂ. + ಜಿಎಸ್ಟಿ ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಮೇಲಿನ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಮರ್ಥ ಪೋರ್ಟಲ್ https://nfsunt.samarth.edu.in/index.php/site/login ಗೆ ಭೇಟಿ ನೀಡಿ.
• ನಂತರ ಬಳಕೆದಾರರ ನೋಂದಾಯಿತ ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.