ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದಲ್ಲಿ ಪರೀಕ್ಷೆ ಇಲ್ಲದೆ ಉಪ ವ್ಯವಸ್ಥಾಪಕರ ಭರ್ತಿ

Published on:

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಡಿ ಬರುವ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ವು ತನ್ನ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಖಾಲಿ ಇರುವ ಉಪ ವ್ಯವಸ್ಥಾಪಕ (ತಾಂತ್ರಿಕ) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.

ಒಟ್ಟು 60 ಸ್ಥಾನಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳನ್ನು 2026ರ ಗೇಟ್‌ ಅಂಕಗಳನ್ನು ಪರಿಗಣಿಸಿ ನೇರ ನೇಮಕಾತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಜೂ.15 ರೊಳಗೆ NAHI ಅಧಿಕೃತ ಜಾಲತಾಣ https://vacancyportal.nhai.org/DeputyMgrGateCivil/UserManager/User/index.aspx ಕ್ಕೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮೇ 15, 2026
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜೂನ್ 15, 2026

ಮೀಸಲಾತಿ ಅನ್ವಯ ಖಾಲಿ ಇರುವ ಹುದ್ದೆಗಳ ವಿವರ:

ಸಾಮಾನ್ಯ 26
ಪರಿಶಿಷ್ಟ ಜಾತಿ 09
ಪರಿಶಿಷ್ಟ ಪಂಗಡ 04
ಒಬಿಸಿ 16
ಇಡಬ್ಲ್ಯೂಎಸ್ 05

ಶೈಕ್ಷಣಿಕ ಅರ್ಹತೆ:

NHAI ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಾನ್ಯವಾದ ಗೇಟ್ ಸ್ಕೋರ್ 2026 ಅಂಕಗಳನ್ನು ಹೊಂದಿರಬೇಕು.

ವಯೋಮಿತಿ:

15-06-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಬಿಡಿ ಪ.ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.

ಆಯ್ಕೆ ವಿಧಾನ:

  • ಗೇಟ್ ಸ್ಕೋರ್ 2026ರ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ಸಂದರ್ಶನ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 56,100-1,77,500ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಅರ್ಜಿ‌ ಸಲ್ಲಿಸುವ ವಿಧಾನ:

• ಮೊದಲಿಗೆ ಅಭ್ಯರ್ಥಿಗಳು NAHI ಅಧಿಕೃತ ಜಾಲತಾಣ https://vacancyportal.nhai.org/DeputyMgrGateCivil/UserManager/User/index.aspx ಕ್ಕೆ ಭೇಟಿ ನೀಡಿ.

• ಈಗಾಗಲೇ ನೋಂದಾಯಿಸಿದ್ದಲ್ಲಿ ಬಳಕೆದಾರರ ಐಡಿ ಹಾಗೂ ಗುಪ್ತಪದ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಬಳಿಕ *ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) GATE 2026 ಅಂಕಗಳ ಆಧಾರದ ಮೇಲೆ 60 ಉಪ ವ್ಯವಸ್ಥಾಪಕ (ತಾಂತ್ರಿಕ) ಹುದ್ದೆಗಳ ನೇಮಕಾತಿ* ಅರ್ಜಿ ನಮೂನೆಯನ್ನು ಆಯ್ಕೆ ಮಾಡಿ.

• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websitehttps://nhai.gov.in/
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದಲ್ಲಿ ಪರೀಕ್ಷೆ ಇಲ್ಲದೆ ಉಪ ವ್ಯವಸ್ಥಾಪಕರ ಭರ್ತಿ”

Leave a Comment