ಭಾರತ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ವು ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ.
ವಿವಿಧ ವೃಂದಗಳಲ್ಲಿ ಉಪ ವ್ಯವಸ್ಥಾಪಕರು, ಗ್ರಂಥಾಲಯ ಮತ್ತು ಮಾಹಿತಿ ಸಹಾಯಕ, ಕಿರಿಯ ಭಾಷಾಂತರ ಅಧಿಕಾರಿ, ಲೆಕ್ಕಪರಿಶೋಧಕ ಹಾಗೂ ಸ್ಟೆನೋಗ್ರಾಫರ್ ಸೇರಿದಂತೆ ಒಟ್ಟು 84 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NAHI ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/95810/Index.htmlಕ್ಕೆ ಭೇಟಿ ನೀಡಿ. ಡಿ.15ರೊಳಗೆ ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 30, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 15, 2025
ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 15, 2025
ಹುದ್ದೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ
✓ ಉಪ ವ್ಯವಸ್ಥಾಪಕ (09) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಣಕಾಸು ವಿಷಯದಲ್ಲಿ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (MBA) ಪದವಿ ಪೂರ್ಣಗೊಳಿಸಿರಬೇಕು.
✓ ಗ್ರಂಥಾಲಯ ಮತ್ತು ಮಾಹಿತಿ ಸಹಾಯಕ (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
✓ ಕಿರಿಯ ಭಾಷಾಂತರ ಅಧಿಕಾರಿ (01) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು, ಇಂಗ್ಲಿಷ್ ಕಡ್ಡಾಯ ಅಥವಾ ಐಚ್ಛಿಕ ವಿಷಯವಾಗಿ ಅಥವಾ ಪದವಿ ಮಟ್ಟದಲ್ಲಿ ಪರೀಕ್ಷಾ ಮಾಧ್ಯಮವಾಗಿ ಅಧ್ಯಯನ ಮಾಡಿರಬೇಕು.
✓ ಲೆಕ್ಕಪರಿಶೋಧಕ (42) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು ಮತ್ತು ಚಾರ್ಟರ್ಡ್ ಅಕೌಂಟೆಂಟ್ (CA)/ವೆಚ್ಚ ಮತ್ತು ನಿರ್ವಹಣಾ ಲೆಕ್ಕಪತ್ರಗಾರ (CMA)ನಲ್ಲಿ ಮಧ್ಯಂತರ ಪದವಿ ಪೂರ್ಣಗೊಳಿಸಿರಬೇಕು.
✓ ಸ್ಟೆನೋಗ್ರಾಫರ್(31) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ನಿಗದಿಪಡಿಸಿದ ಟೈಪಿಂಗ್ ವೇಗವನ್ನು ಹೊಂದಿರಬೇಕು.
ವಯೋಮಿತಿ:
ಸ್ಟೆನೋಗ್ರಾಫರ್ ಹುದ್ದೆಗೆ ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು ಉಳಿದ ಎಲ್ಲಾ ಹುದ್ದೆಗಳಿಗೂ ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ರಿಂದ 15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಆಯ್ಕೆ ವಿಧಾನ:
CBT ಪರೀಕ್ಷೆ
ಸಂದರ್ಶನ
ಕೌಶಲ್ಯ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವೇತನ ಶ್ರೇಣಿ ಇರುತ್ತದೆ;
ಉಪ ವ್ಯವಸ್ಥಾಪಕ ಹುದ್ದೆಗೆ – ರೂ.56,100-1,77500 ಗ್ರಂಥಾಲಯ ಮತ್ತು ಮಾಹಿತಿ ಸಹಾಯಕ ಹಾಗೂ ಕಿರಿಯ ಭಾಷಾಂತರ ಅಧಿಕಾರಿ ಹುದ್ದೆಗೆ – ರೂ.35,400-1,12,400 ಲೆಕ್ಕಪರಿಶೋಧಕ ಹುದ್ದೆಗೆ – ರೂ.29,200-92,300 ಸ್ಟೆನೋಗ್ರಾಫರ್ ಹುದ್ದೆಗೆ – ರೂ.25,500-81,100
ಅರ್ಜಿ ಶುಲ್ಕ:
ಮೀಸಲಾತಿ ಇಲ್ಲದ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 500ರೂ. ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೂ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಹಂತ-ಹಂತವಾದ ಪ್ರಕ್ರಿಯೆ
• ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು NAHI ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/95810/Index.html ಕ್ಕೆ ಭೇಟಿ ನೀಡಿ.
Nhai Application Form 2025
• ಈಗಾಗಲೇ ನೋಂದಾಯಿಸಿದ್ದಲ್ಲಿ ಬಳಕೆದಾರರ ಐಡಿ ಹಾಗೂ ಗುಪ್ತಪದ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
ಹೆಚ್ಚಿನ ಮಾಹಿತಿಗಾಗಿ: NAHI ಸಹಾಯವಾಣಿ ಸಂಖ್ಯೆ 9513252099 ಅನ್ನು ಸಂಪರ್ಕಿಸಬಹುದು.
vikas bijjaragi
Tq babalswera
SIR I HAVE UN COMPLETE BSC BUT I HAVE COMPLETE TALLY