ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಾವಕಾಶ

Published on:

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್(NHIDCL)ನಲ್ಲಿ ಉಪ ವ್ಯವಸ್ಥಾಪಕ(ಟೆಕ್ನಿಕಲ್‌ ಕೇಡರ್‌) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ 09ರಿಂದ ಪ್ರಾರಂಭವಾಗಲಿದೆ.

ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ್, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಪ್ರಸ್ತುತ ಖಾಲಿ ಇರುವ 85 ಸ್ಥಾನಗಳಿಗೆ ಭರ್ತಿ ಮಾಡಿಕೊಳ್ಳಲಿದೆ. ಸಿವಿಲ್‌ ಎಂಜಿನಿಯರಿಂಗ್‌ ಜೊತೆಗೆ ಗೇಟ್‌ ಅರ್ಹತೆ ಹೊಂದಿರುವರ ಆಸಕ್ತರು ಅರ್ಜಿ ಸಲ್ಲಿಕೆಗಾಗಿ ಜೂ.08 ರೊಳಗೆ ಎನ್‌ಹೆಚ್‌ಐಡಿಸಿಎಲ್‌ ಅಧಿಕೃತ ಜಾಲತಾಣ https://www.nhidcl.com/en/current-jobsಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮೇ 09, 2026
  • ನೇಮಕಾತಿಗೆ ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜೂನ್ 08, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಅಭ್ಯರ್ಥಿಗಳು 2024/2025/2026 ಯಾವುದೇ ವರ್ಷದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಗೇಟ್ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರಬೇಕು.

ವಯೋಮಿತಿ;

08-06-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 34 ವರ್ಷಗಳು

ವಯೋಮಿತಿ ಸಡಿಲಿಕೆ: ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು 2024/2025/2026 ಯಾವುದೇ ವರ್ಷದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಗೇಟ್ ಪರೀಕ್ಷೆಯಲ್ಲಿ ಗಳಿಸಿದ ಅತ್ಯುತ್ತಮ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನಂತರ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

ಸಂಬಳ:

ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹50,000 ಗಳಿಂದ ₹1,60,000ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ;

• ಮೊದಲಿಗೆ ಅಭ್ಯರ್ಥಿಗಳು NHIDCL ನೇಮಕಾತಿ ಪೋರ್ಟಲ್ https://recruitment.nhidcl.com/login ಗೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಅಂತಿಮವಾಗಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form Link(ಮೇ 09ರಿಂದ)Apply Now
Official Websitewww.nhidcl.com
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಾವಕಾಶ”

Leave a Comment