ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಡಿ ಬರುವ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL)ನ ವಿವಿಧ ವಿಭಾಗಗಳಿಗೆ ತಾಂತ್ರಿಕ ಕಾರ್ಯನಿರ್ವಾಹಕರ ನೇಮಕಾತಿಗಾಗಿ ಅರ್ಹ ಅನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
ಸೀನಿಯರ್ ಮ್ಯಾನೇಜರ್(21), ಡೆಪ್ಯೂಟಿ ಜನರಲ್ ಮ್ಯಾನೇಜರ್(15), ಜನರಲ್ ಮ್ಯಾನೇಜರ್(07) ಹಾಗೂ ಸೀನಿಯರ್ ಜನರಲ್ ಮ್ಯಾನೇಜರ್(05) ಸೇರಿದಂತೆ 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 13 ರೊಳಗೆ NHIDCL ಅಧಿಕೃತ ಜಾಲತಾಣ https://recruitment.nhidcl.com/recruitment-portal/loginಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 20, 2025
- ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 19, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
13-01-2026 ರಂತೆ;
✓ ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು
✓ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 41 ವರ್ಷಗಳು
✓ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 44 ವರ್ಷಗಳು
✓ ಸೀನಿಯರ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 48 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಅರ್ಹತಾ ಪರೀಕ್ಷೆ
ಲಿಖಿತ ಪರೀಕ್ಷೆ
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟಿಂಗ್
ಸಂದರ್ಶನ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 70,000ರೂ.ಗಳಿಂದ – 2,60,000ರೂ. ವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಸೀನಿಯರ್ ಮ್ಯಾನೇಜರ್ ಹುದ್ದೆಗೆ- ₹70,000 ರಿಂದ ₹2,00,000
ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ- ₹80,000 ರಿಂದ ₹2,20,000
ಜನರಲ್ ಮ್ಯಾನೇಜರ್ ಹುದ್ದೆಗೆ- ₹90,000 ರಿಂದ ₹2,40,000
ಸೀನಿಯರ್ ಜನರಲ್ ಮ್ಯಾನೇಜರ್ ಹುದ್ದೆಗೆ- ₹1,00,000 ರಿಂದ ₹2,60,000
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಂತ-ಹಂತವಾಗಿ ವಿಧಾನ:
• NHIDCLನ ನೇಮಕಾತಿ ಪೋರ್ಟಲ್ ಲಿಂಕ್ → https://recruitment.nhidcl.com/recruitment-portal/loginಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಮೂಲ ಮಾಹಿತಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.nhidcl.com |
| More Updates | KarnatakaHelp.in |