ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯಲ್ಲಿ ಕಾನೂನು ಸಲಹೆಗಾರರ ನೇಮಕ

ಕಾನೂನು ಪದವೀಧರರಿಗೆ ಆದ್ಯತೆ | ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ

Published on:

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು 05 ಸೀನಿಯರ್ ಪಬ್ಲಿಕ್ ಪ್ರಾಸಿಕ್ಯೂಟರ್ (Senior Public Prosecutor) ಹುದ್ದೆಗಳ ಭರ್ತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿವರೆಗೆ ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು. NIA ಅಧಿಕೃತ ಜಾಲತಾಣ https://nia.gov.in/recruitment-noticesನಲ್ಲಿ ಅರ್ಜಿ ನಮೂನೆ ಡೌನ್ಲೋಡ್‌ ಮಾಡಿಕೊಂಡು ಭರ್ತಿ ಮಾಡಿ, ಜೊತೆಗೆ ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ, ಸಂಸ್ಥೆಯ ಕೇಂದ್ರ ಕಚೇರಿಯ ವಿಳಾಸಕ್ಕೆ ಜ.12ರೊಳಗೆ ತಲುಪುವಂತೆ ತ್ವರಿತ ಅಂಚೆಯ ಮೂಲಕ ಕಳುಹಿಸಿಕೊಡಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು;

  • ಅಧಿಸೂಚನೆಯ ದಿನಾಂಕ – ಡಿಸೆಂಬರ್ 13, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 12, 2026 (ಅಧಿಸೂಚನೆಯ ಪ್ರಕಟಿತ ದಿನದ 30 ದಿನದೊಳಗೆ)

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ನಡೆಸುವಲ್ಲಿ ಕನಿಷ್ಠ 8 ವರ್ಷಗಳ ವಕೀಲರ ಅನುಭವ ಹೊಂದಿರುವ ಕಾನೂನು ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಯೋಮಿತಿ:

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಿಯಮಗಳ ಅನುಸಾರ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹1,25,000 ಮಾಹೆಯಾನ ವೇತನದ ಜೊತೆಗೆ TA/DA ನೀಡಲಾಗುತ್ತದೆ.

ಆಯ್ಕೆ ವಿಧಾನ:

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಕೆ ಹೇಗೆ.?

• ಮೊದಲಿಗೆ ಅಭ್ಯರ್ಥಿಗಳು NIA ಅಧಿಕೃತ ಜಾಲತಾಣ https://nia.gov.in/recruitment-notices ಕ್ಕೆ ಭೇಟಿ ನೀಡಿ.

• ಮೌಲ್ಯಮಾಪನ ವರದಿಗಳು ವಿಭಾಗದಲ್ಲಿ ನೀಡಲಾಗಿರುವ “NIA ಗೆ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರನ್ನು ನೇಮಿಸಿಕೊಳ್ಳಲು ಸೂಚನೆ” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ ಉದ್ಯೋಗ ಅಧಿಸೂಚನೆ ಹಾಗೂ ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಈ ಕೆಳಗಿನ ವಿಳಾಸಕ್ಕೆ ಜನವರಿ 13ರೊಳಗೆ ತಲುಪುವಂತೆ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.

ವಿಳಾಸ: ಎಸ್‌ಪಿ (ಆಡಳಿತ), ಎನ್‌ಐಎ ಪ್ರಧಾನ ಕಚೇರಿ, ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ, ನವದೆಹಲಿ – 110003

Important Direct Links:

Official Notification and Application Form PDFDownload
Official Websitenia.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯಲ್ಲಿ ಕಾನೂನು ಸಲಹೆಗಾರರ ನೇಮಕ”

Leave a Comment