NIACLನಲ್ಲಿ ಅಪ್ರೆಂಟಿಸ್‌ಶಿಪ್‌ ಅರ್ಜಿ ಆಹ್ವಾನ

ಸ್ಟೈಪೆಂಡ್‌ ಸೌಲಭ್ಯ

Published on:

ಮುಂಬೈ: ಸಾರ್ವಜನಿಕ ವಲಯದ ಪ್ರಮುಖ ವಿಮಾ ಕಂಪನಿಯಾಗಿರುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ 2026-27ನೇ ಸಾಲಿಗೆ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ.

ಒಟ್ಟು 550 ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯವರೆಗೆ ತರಬೇತಿ ನೀಡಲಿದೆ. ಯಾವುದೇ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎನ್‌ಎಟಿಎಸ್‌ ಅಧಿಕೃತ ವೆಬ್ಸೈಟ್ https://nats.education.gov.in/student_login.php ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಜು.06ರವರೆಗೆ ಅವಕಾಶವಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜೂನ್ 23, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 06, 2026
  • ಆನ್‌ಲೈನ್‌ ಪರೀಕ್ಷೆ – ಜುಲೈ 12, 2026

ವಿದ್ಯಾರ್ಹತೆ:

NIACL ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು ಮತ್ತು ಅಭ್ಯರ್ಥಿಯು ಅರ್ಜಿ ಸಲ್ಲಿಸುತ್ತಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ಭಾಷೆಯ ಜ್ಞಾನವನ್ನು ಹೊಂದಿರುವುದು ಅತ್ಯಗತ್ಯ ಅರ್ಹತೆ ಆಗಿರುತ್ತದೆ.

ವಯೋಮಿತಿ:

01-06-2026 ರಂತೆ;

ಕನಿಷ್ಠ ವಯಸ್ಸಿನ ಮಿತಿ 21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು

NIACL ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

ಸ್ಟೈಪೆಂಡ್‌:

ಸದರಿ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,300 ಸ್ಟೈಪೆಂಡ್‌ ಅನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

  • ಆನ್‌ಲೈನ್ ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ದೈಹಿಕ/ವೈದ್ಯಕೀಯ ಫಿಟ್ನೆಸ್ ಪರೀಕ್ಷೆ

ಅರ್ಜಿ ಶುಲ್ಕ(ಹಳೆಯ ಅಧಿಸೂಚನೆಯಂತೆ):

ಸಾಮಾನ್ಯ ಮತ್ತು ಒಬಿಸಿ ಪುರುಷ ಅಭ್ಯರ್ಥಿಗಳಿಗೆ ರೂ.944
ಸಾಮಾನ್ಯ ಮತ್ತು ಒಬಿಸಿ ಮಹಿಳಾ ಅಭ್ಯರ್ಥಿಗಳಿಗೆ ರೂ.708
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರೂ.472

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು NATS ಅಧಿಕೃತ ವೆಬ್ಸೈಟ್ https://nats.education.gov.in/student_login.php ಗೆ ಭೇಟಿ ನೀಡಿ.

• ವಿದ್ಯಾರ್ಥಿ ನೋಂದಣಿ ಅಥವಾ ವಿದ್ಯಾರ್ಥಿ ಲಾಗಿನ್ ಆಗಿ.

• ಜಾಹೀರಾತು ಮಾಡಲಾದ ಖಾಲಿ ಹುದ್ದೆಗಳ ವಿರುದ್ಧ ಅರ್ಜಿ ಸಲ್ಲಿಸಿ ಅಡಿಯಲ್ಲಿ *ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಅಪ್ರೆಂಟಿಸ್ ಕಾಯ್ದೆ, 1961ರ ಅಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿ 2026* ಜಾಹಿರಾತನ್ನು ಹುಡುಕಿ.

• ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ, ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಲು BFSI SSC(https://beep.bfsissc.com/candidate_login)ನಿಂದ ಲಿಂಕ್ ಹೊಂದಿರುವ ಇಮೇಲ್ ಅನ್ನು ಸ್ವೀಕರಿಸುತ್ತಾರೆ.

• ಮುಂದುವರೆದಂತೆ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಸ್ಕ್ಯಾನ್ ಮಾಡಿ, ಅರ್ಜಿ ಶುಲ್ಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ.

Important Direct Links:

Official Notification PDFDownload
Online Application Form LinkApply Now
Official Websitewww.newindia.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment