ಈಶಾನ್ಯ ಗಡಿ ರೈಲ್ವೆ(NFR)ಗುವಾಹಟಿಯಲ್ಲಿ ಕ್ರೀಡಾ ಕೋಟಾದಡಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
2025-26ನೇ ಸಾಲಿಗೆ ಕ್ರೀಡಾ ಕೋಟಾದ ಅಡಿಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು 56 ಹುದ್ದೆಗಳಿಗೆ ಕ್ರೀಡಾ ಅಭ್ಯರ್ಥಿಗಳನ್ನು ನೇಮಕಾತಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಈಶಾನ್ಯ ಫ್ರಾಂಟಿಯರ್ ರೈಲ್ವೇ ಅಧಿಕೃತ ಜಾಲತಾಣ https://www.nfr-recruitment.in/ಕ್ಕೆ ಭೇಟಿ ನೀಡಿ. ಅ.15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬುಹುದು.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 16, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 15, 2025
ಶೈಕ್ಷಣಿಕ ಅರ್ಹತೆ:
• ಲೆವೆಲ್ 4/5 ರ ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಲೆವೆಲ್3/2 ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ಕೌನ್ಸಿಲ್/ ಸಂಸ್ಥೆಯಿಂದ 12ನೇ ತರಗತಿ /ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಲೆವೆಲ್1 ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಥವಾ ಐಟಿಐ/ತತ್ಸಮಾನ ಅರ್ಹತೆ ಹೊಂದಿರಬೇಕು. ಅಥವಾ NCVT ಯಿಂದ ನೀಡಲಾದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (NAC) ಪಡೆದಿರಬೇಕು.
ವಯೋಮಿತಿ:
01-01-2026 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 25 ವರ್ಷಗಳು
ಆಯ್ಕೆ ವಿಧಾನ:
ಕಿರುಪಟ್ಟಿ
ಕ್ರೀಡಾ ಸಾಧನೆಯ ಪ್ರಯೋಗ
ಶೈಕ್ಷಣಿಕ ಅರ್ಹತೆ, ಸಂದರ್ಶನ ಮತ್ತು ಮೌಲ್ಯಮಾಪನ
ಸಂಬಳ:
ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ (GP 1800ರೂ. – GP 2800ರೂ.) ವರೆಗೆ ವೇತನವನ್ನು ನೀಡಲಾಗುತ್ತದೆ.
ಲೆವೆಲ್ 4/5 ರ ಹುದ್ದೆಗಳಿಗೆ- *GP Rs.2800/2400 ಲೆವೆಲ್ 3/2 ಹುದ್ದೆಗಳಿಗೆ – GP Rs.2000/1900 ಲೆವೆಲ್ 1 ಹುದ್ದೆಗಳಿಗೆ – GP Rs.1800
(*Grade Pay)
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ, ಅಲ್ಪಸಂಖ್ಯಾತ, ಆರ್ಥಿಕವಾಗಿ ಹಿಂದುಳಿದ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 250ರೂ. ಹಾಗೂ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 500ರೂ.
ಅರ್ಜಿ ಸಲ್ಲಿಕೆ ಹೇಗೆ..?
ಅರ್ಜಿ ಸಲ್ಲಿಸುವ ವಿಧಾನ ಇಂತಿದೆ;
ಈಶಾನ್ಯ ಗಡಿನಾಡು ರೈಲ್ವೆ(NFR) ಅಧಿಕೃತ ವೆಬ್ಸೈಟ್ https://www.nfr-recruitment.in/#/auth/home ಗೆ ಭೇಟಿ ನೀಡಿ.
ನೋಂದಣಿ ಐಡಿ ಹಾಗೂ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಉದ್ಯೋಗ ಅಧಿಸೂಚನೆ ಸಂಖ್ಯೆ: 03/2025 ಜಾಹೀರಾತಿನ ಮೂಲಕ ಕ್ರೀಡಾ ಕೋಟಾದ ಅಡಿಯಲ್ಲಿ ನೇಮಕಾತಿ ಅರ್ಜಿ ನಮೂನೆ ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.