NPCILನಲ್ಲಿ ಉದ್ಯೋಗಾವಕಾಶ

Published on:

ಮುಂಬೈ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ತನ್ನ ನಾನಾ ವಿಭಾಗಗಳಿಗೆ ಕಾರ್ಯನಿರ್ವಾಹಕ ತರಬೇತಿದಾರ ಹುದ್ದೆಗಳನ್ನು ಗೇಟ್‌ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೆಕಾನಿಕಲ್-125, ಕೆಮಿಕಲ್-40, ಎಲೆಕ್ಟ್ರಿಕಲ್-65, ಎಲೆಕ್ಟ್ರಾನಿಕ್ಸ್-50, ಇನ್ಸ್ಟ್ರುಮೆಂಟೇಶನ್-15 ಹಾಗೂ ಸಿವಿಲ್-35 ಸೇರಿದಂತೆ ಒಟ್ಟು 330 ಸ್ಥಾನಗಳಿಗೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 30 ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು NPCIL ಅಧಿಕೃತ ಜಾಲತಾಣ https://www.npcilcareers.co.in/ETHQ10042026/candidate/Default.aspxದ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 10, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 30, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 30, 2026

ವಿಭಾಗವಾರು ಖಾಲಿ ಇರುವ ಹುದ್ದೆಗಳ ವಿವರ:

ಮೆಕಾನಿಕಲ್ 125 ಹುದ್ದೆಗಳು
ಕೆಮಿಕಲ್ 40 ಹುದ್ದೆಗಳು
ಎಲೆಕ್ಟ್ರಿಕಲ್ 65 ಹುದ್ದೆಗಳು
ಎಲೆಕ್ಟ್ರಾನಿಕ್ಸ್ 50 ಹುದ್ದೆಗಳು
ಇನ್ಸ್ಟ್ರುಮೆಂಟೇಶನ್ 15 ಹುದ್ದೆಗಳು
ಸಿವಿಲ್ 35 ಹುದ್ದೆಗಳು

ಒಟ್ಟು – 330 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ಪದವಿ ಪೂರ್ಣಗೊಳಿಸಬೇಕು ಹಾಗೂ ಮಾನ್ಯವಾದ (GATE 2024, GATE 2025 ಮತ್ತು GATE 2026) ಗೇಟ್ ಅಂಕಗಳನ್ನು ಹೊಂದಿರಬೇಕು.

ವಯಸ್ಸಿನ ಮಿತಿ:

30-04-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 26 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10-15 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಗೇಟ್ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ಸಂದರ್ಶನ
  • ದಾಖಲಾತಿ ಪರಿಶೀಲನೆ
  • ಮೆರಿಟ್ ಪಟ್ಟಿ
  • ವೈದ್ಯಕೀಯ ಫಿಟ್‌ನೆಸ್‌ ಪರೀಕ್ಷೆ

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ₹74,000 ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹500
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, DODPKIA, ಮಹಿಳೆಯರು ಮತ್ತು NPCIL ಉದ್ಯೋಗಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

• NPCIL ಅಧಿಕೃತ ಜಾಲತಾಣ https://www.npcilcareers.co.in/ETHQ10042026/candidate/Default.aspxಕ್ಕೆ ಭೇಟಿ ನೀಡಿ.

Npcil Executive Trainee Through Gate Notification 2026
Npcilನಲ್ಲಿ ಉದ್ಯೋಗಾವಕಾಶ

• ಬಳಿಕ ನೂತನ ಅರ್ಜಿದಾರರಾಗಿದ್ದಲ್ಲಿ ನೋಂದಣಿ ಮಾಡಿ/ಈಗಾಗಲೇ ನೋಂದಾಯಿಸಿದ್ದಲ್ಲಿ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.npcil.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment