ಭಾರತ ಸರ್ಕಾರದ ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ, ಅರ್ಜಿ ಸಲ್ಲಿಕೆ ಜ.15ರಿಂದ ಆರಂಭವಾಗಲಿದೆ.
ವಿವಿಧ ವೃಂದದ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡರಿ ಟ್ರೈನಿ, ಪ್ಯಾರಾ ಮೆಡಿಕಲ್ ಹಾಗೂ ನಾನ್ ಟೆಕ್ನಿಕಲ್ ಸೇರಿದಂತೆ ಒಟ್ಟು 114 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆ.04ರೊಳಗೆ NPCIL ಅಧಿಕೃತ ಜಾಲತಾಣ https://npcilcareers.co.in/MainSiten/DefaultInfo.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10ನೇ ತರಗತಿ/ದ್ವಿತೀಯ ಪಿಯುಸಿ/ಸಂಬಂಧಿತ ವಿಭಾಗದ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ/ಬಿ.ಎಸ್ಸಿ/ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿದ್ಯಾರ್ಹತೆ ವಿವರಗಳಿಗಾಗಿ ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.
ವಯಸ್ಸಿನ ಮಿತಿ:
04-02-2026 ರoತೆ;
ಕನಿಷ್ಠ ವಯಸ್ಸಿನ ಮಿತಿ – 18-21 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 24-30 ವರ್ಷಗಳು