ಭಾರತದಲ್ಲಿನ ವಿವಿಧ ಪದವಿಪೂರ್ವ ವೈದ್ಯಕೀಯ (MBBS, BDS, BAMS, BUMS, BSMS, BHMS ಮತ್ತು ಇತರೆ) ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಯುಜಿ-ನೀಟ್)ಯ ನೋಂದಣಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಭಾನುವಾರದಿಂದ ಪ್ರಾರಂಭಿಸಿದೆ.
ಕನ್ನಡ ಭಾಷೆ ಸೇರಿದಂತೆ ಒಟ್ಟು 13 ಭಾಷೆಗಳಲ್ಲಿ ಪ್ರವೇಶ ಪರೀಕ್ಷೆ ಜರುಗಲಿದೆ. ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯಗಳನ್ನು ಅಭ್ಯಸಿಸಿ ತೇರ್ಗಡೆ ಹೊಂದಿರುವ ಅಥವಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನೋಂದಣಿಗೆ ಅರ್ಹರು. ಆಸಕ್ತ ವಿದ್ಯಾರ್ಥಿಗಳು ಎನ್ಟಿಎ ನೀಟ್ ಅಧಿಕೃತ ವೆಬ್ಸೈಟ್ https://neet.nta.nic.in/ಗೆ ಭೇಟಿ ನೀಡಿ, ಮಾ.08ರೊಳಗೆ ನೋಂದಣಿ ಮಾಡಿಕೊಳ್ಳಬಹುದು.
NEET (UG) 2026 ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – ಫೆಬ್ರವರಿ, 08, 2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – ಮಾರ್ಚ್ 08, 2026
ಆನ್ಲೈನ್ನಲ್ಲಿ ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮಾರ್ಚ್ 08, 2026
ಆನ್ಲೈನ್ನಲ್ಲಿ ಅರ್ಜಿಯನ್ನು ತಿದ್ದುಪಡಿ ಮಾಡಲು ಕೊನೆಯ ದಿನಾಂಕ – ಮಾರ್ಚ್ 10-12, 2026
NEET (UG) ಪರೀಕ್ಷೆ ನಡೆಯುವ ದಿನಾಂಕ – ಮೇ 03, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ/ಜೈವಿಕ ತಂತ್ರಜ್ಞಾನ ಮತ್ತು ಇಂಗ್ಲಿಷ್ ಅನ್ನು ಹೆಚ್ಚುವರಿ ವಿಷಯಗಳಾಗಿ ಅಧ್ಯಯನ ಮಾಡಿ ಉತ್ತೀರ್ಣರಾದ ಅಭ್ಯರ್ಥಿಗಳು ಹಾಗೂ 2025-26ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ, ಈಗಾಗಲೇ ಬರೆದು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.
NEET (UG) 2026ರ ಪರೀಕ್ಷೆಯ ವಿವರ:
NEET (UG) 2026 ಅನ್ನು ಮೇ 03 ರಂದು ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ಒಟ್ಟು 13 (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಶಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು) ಭಾಷೆಗಳಲ್ಲಿ ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 17 ವರ್ಷಗಳು
• ಗರಿಷ್ಠ ವಯಸ್ಸಿನ ಮಿತಿ – ಯಾವುದೇ ನಿಗದಿತ ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಪರೀಕ್ಷೆಯಲ್ಲಿ ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್
ಕೌನ್ಸಿಲಿಂಗ್
ದಾಖಲೆ ಪರಿಶೀಲನೆ
ಪ್ರವೇಶಾತಿ
ಪರೀಕ್ಷಾ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ರೂ.1700 ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ-ಎನ್ಸಿಎಲ್ ಅಭ್ಯರ್ಥಿಗಳಿಗೆ – ರೂ.1600 ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ – ರೂ.1000 ಭಾರತದ ಹೊರಗಿನ ಅಭ್ಯರ್ಥಿಗಳಿಗೆ – ರೂ.9500
ಅರ್ಜಿ ಸಲ್ಲಿಕೆಯ ವಿಧಾನ:
• NTA NEET ಅಧಿಕೃತ ವೆಬ್ಸೈಟ್ https://neet.nta.nic.in/ಗೆ ಭೇಟಿ ನೀಡಿ.
• ನಂತರ ಅಭ್ಯರ್ಥಿ ಚಟುವಟಿಕೆ ವಿಭಾಗದ ಕೆಳಗೆ ನೀಡಲಾಗಿರುವ -“NEET(UG)-2026 ಗಾಗಿ ನೋಂದಣಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಅಪ್ಲಿಕೇಶನ್ ಸಂಖ್ಯೆ, ಪಾಸ್ವರ್ಡ್ ಹಾಗೂ ಕ್ಯಾಪ್ಚ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಇತ್ತೀಚಿನ ಛಾಯಾಚಿತ್ರ ಮತ್ತು ಸಹಿ ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಪರೀಕ್ಷಾ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಳ್ಳಿ.
Azr
2nd puc and iti complete