ಭಾರತ ಸರ್ಕಾರದ ಉದ್ಯಮವಾಗಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ತನ್ನ ಕಾರ್ಯಾಚರಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 250 ಅಭ್ಯರ್ಥಿಗಳನ್ನು ನಿಗದಿತ ಅವಧಿಯ ಆಧಾರ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಮೇ 07ರವರೆಗೆ ಅವಕಾಶವಿದೆ. ಬಿ.ಇ./ಬಿ.ಟೆಕ್ ಪದವೀಧರ ಉದ್ಯೋಗಾಕಾಂಕ್ಷಿಗಳು ಎನ್‌ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.phpಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಏಪ್ರಿಲ್ 23, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 07, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 07, 2026
ಮೀಸಲಾತಿಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳ ವಿವರ
ಸಾಮಾನ್ಯ ವರ್ಗ 109 ಹುದ್ದೆಗಳು
ಇಡಬ್ಲ್ಯೂಎಸ್ ವರ್ಗ 25 ಹುದ್ದೆಗಳು
ಒಬಿಸಿ ವರ್ಗ 39 ಹುದ್ದೆಗಳು
ಪರಿಶಿಷ್ಟ ಜಾತಿ ವರ್ಗ 42 ಹುದ್ದೆಗಳು
ಪರಿಶಿಷ್ಟ ಪಂಗಡ ವರ್ಗ 35 ಹುದ್ದೆಗಳು
ಒಟ್ಟು – 250 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
NTPC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 40% ಅಂಕಗಳೊಂದಿಗೆ ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ./ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ಕನಿಷ್ಠ 01 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ 35 ವರ್ಷಗಳು
ಆಯ್ಕೆ ವಿಧಾನ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಅನುಸಾರ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ₹55,000 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹500
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ…
•ಅಭ್ಯರ್ಥಿಗಳು NTPC ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.
• ನಂತರ ಸೂಚನಾ ಫಲಕ ವಿಭಾಗದಲ್ಲಿ ನೀಡಲಾಗಿರುವ “ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆ) ಹುದ್ದೆಗೆ ನಿಗದಿತ ಅವಧಿಯ ನೇಮಕಾತಿ, ಅಡ್ವ.05/26” *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಮುಂದುವರೆದಂತೆ ಬಳಕೆದಾರರ ಐಡಿ ಹಾಗೂ ಇ-ಮೇಲ್ ಐಡಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಇದಾದ ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | ntpc.co.in |
| More Updates | KarnatakaHelp.in |