NTPCಯಲ್ಲಿ ಸಹಾಯಕ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Published on:

ನವದೆಹಲಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC)ನಲ್ಲಿ ಖಾಲಿ ಇರುವ ಸಹಾಯಕ ಅಧಿಕಾರಿ(ಎಓ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 22ರವೆರೆಗೆ ಅವಕಾಶವಿದೆ.

ತನ್ನ ಯೋಜನೆಗಳು/ಕೇಂದ್ರಗಳಲ್ಲಿನ ಪರಿಸರ ನಿರ್ವಹಣೆ ವಿಭಾಗಕ್ಕೆ ಒಟ್ಟು 20 ಸ್ಥಾನಗಳಿಗೆ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಎನ್‌ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮೇ 08, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 22, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 22, 2026

ಮೀಸಲಾತಿಯ ಅನ್ವಯ ಖಾಲಿ ಇರುವ ಹುದ್ದೆಗಳ ವಿವರ:

ಸಾಮಾನ್ಯ 08 ಹುದ್ದೆಗಳು
ಇಡಬ್ಲ್ಯೂಎಸ್ 02 ಹುದ್ದೆಗಳು
ಒಬಿಸಿ 05 ಹುದ್ದೆಗಳು
ಪರಿಶಿಷ್ಟ ಜಾತಿ 03 ಹುದ್ದೆಗಳು
ಪರಿಶಿಷ್ಟ ಪಂಗಡ 02 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪರಿಸರ ವಿಭಾಗದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಎಂಜಿನಿಯರ್ ಪದವಿ ಪೂರ್ಣಗೊಳಿಸಿರಬೇಕು.

ಅಥವಾ

ಪರಿಸರ ಎಂಜಿನಿಯರಿಂಗ್/ಪರಿಸರ ವಿಜ್ಞಾನ/ಪರಿಸರ ನಿರ್ವಹಣೆ ವಿಷಯದಲ್ಲಿ ಸ್ನಾತಕೋತ್ತರ ಪದವಿ/ ಸ್ನಾತಕೋತ್ತರ ಡಿಪ್ಲೊಮಾ/ ಎಂ.ಎಸ್ಸಿ/ ಎಂ.ಟೆಕ್ ಪದವಿ ಪೂರ್ಣಗೊಳಿಸಿರಬೇಕು/ ಪರಿಸರ ಎಂಜಿನಿಯರಿಂಗ್/ ಪರಿಸರ ವಿಜ್ಞಾನ/ ಪರಿಸರ ನಿರ್ವಹಣೆ ವಿಶೇಷತೆಯೊಂದಿಗೆ ಎಂ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.

ಆಯ್ಕೆ ವಿಧಾನ:

  • ಲಿಖಿತ/ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಸಂದರ್ಶನ

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ 30,000-1,20,000ರೂ. ವರೆಗೆ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹500
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆನ್‌ಲೈನ್‌ ಅರ್ಜಿ ಸಲ್ಲಿಸುವುದು ಹೇಗೆ.?

• ಅಭ್ಯರ್ಥಿಗಳು NTPC ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.

• ನಂತರ “ಸಹಾಯಕ ಅಧಿಕಾರಿ (ಪರಿಸರ ನಿರ್ವಹಣೆ), Advt.06A/26 ಹುದ್ದೆಗೆ ನೇಮಕಾತಿ” ವಿಭಾಗದ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಮುಂದುವರೆದಂತೆ ಬಳಕೆದಾರರ ಐಡಿ ಹಾಗೂ ಇ-ಮೇಲ್ ಐಡಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಇದಾದ ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitentpc.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

3 thoughts on “NTPCಯಲ್ಲಿ ಸಹಾಯಕ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ”

Leave a Comment