ಭಾರತದ ಅತಿದೊಡ್ಡ ವಿದ್ಯುತ್ ಸಮೂಹವಾಗಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC) ಗೇಟ್-2025ರ ಮೂಲಕ ತನ್ನ ವಿವಿಧ ವಿಭಾಗಗಳಿಗೆ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರರ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಎಲೆಕ್ಟ್ರಿಕಲ್(165), ಮೆಕ್ಯಾನಿಕಲ್(210), ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್(125), ಕಂಪ್ಯೂಟರ್ ಸೈನ್ಸ್/ಇನ್ಫಾರ್ಮಶನ್ ಟೆಕ್ನಾಲಜಿ(15) ವಿಭಾಗಗಳಿಗೆ ಒಟ್ಟು 515 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಇಂಜಿನಿಯರ್ ಪದವೀಧರರು ಫೆ.25ರೊಳಗೆ ಎನ್ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.phpಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಫೆಬ್ರವರಿ 11, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 25, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 25, 2026
ಶೈಕ್ಷಣಿಕ ಅರ್ಹತೆ:
NTPC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಬೇಕು ಹಾಗೂ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE)-2025) ಪರೀಕ್ಷೆಗೆ ಹಾಜರಾಗಿರಬೇಕು ಮತ್ತು ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.
2025ರ GATE ಅಂಕಗಳ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ದಾಖಲೆ ಪರಿಶೀಲನೆ
ಅಂತಿಮ ಆಯ್ಕೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ₹40,000 ರಿಂದ 1,40,000/- (ಮೂಲ ವೇತನ ₹40,000ವರೆಗೆ) ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹500 ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಮಹಿಳೆಯರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಅಭ್ಯರ್ಥಿಗಳು NTPC ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.
• ನಂತರ – “ಅಡ್ವಟ್ ಸಂಖ್ಯೆ-14/24 ರ ವಿರುದ್ಧ ಗೇಟ್-2025 ಮೂಲಕ EET-2025 ನೇಮಕಾತಿ” ವಿಭಾಗದ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಕೆದಾರರ ಐಡಿ ಹಾಗೂ ಇ-ಮೇಲ್ ಐಡಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಇದಾದ ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.