NTPC ಲಿಮಿಟೆಡ್‌ನಲ್ಲಿ ಕಾರ್ಯನಿರ್ವಾಹಕ ತರಬೇತಿದಾರ(EET)ರ ಭರ್ತಿ

ಇಂಜಿನಿಯರ್‌ ಪದವೀಧರಿಗೆ ಆದ್ಯತೆ | ಅರ್ಜಿ ಸಲ್ಲಿಸಲು ಫೆ.25ರ ಗಡುವು

Published on:

ಭಾರತದ ಅತಿದೊಡ್ಡ ವಿದ್ಯುತ್ ಸಮೂಹವಾಗಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC) ಗೇಟ್-2025ರ ಮೂಲಕ ತನ್ನ ವಿವಿಧ ವಿಭಾಗಗಳಿಗೆ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರರ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಎಲೆಕ್ಟ್ರಿಕಲ್(165), ಮೆಕ್ಯಾನಿಕಲ್(210), ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್(125), ಕಂಪ್ಯೂಟರ್ ಸೈನ್ಸ್/ಇನ್ಫಾರ್ಮಶನ್ ಟೆಕ್ನಾಲಜಿ(15) ವಿಭಾಗಗಳಿಗೆ ಒಟ್ಟು 515 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಇಂಜಿನಿಯರ್‌ ಪದವೀಧರರು ಫೆ.25ರೊಳಗೆ ಎನ್‌ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.phpಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಫೆಬ್ರವರಿ 11, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 25, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 25, 2026

ಶೈಕ್ಷಣಿಕ ಅರ್ಹತೆ:

NTPC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಬೇಕು ಹಾಗೂ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE)-2025) ಪರೀಕ್ಷೆಗೆ ಹಾಜರಾಗಿರಬೇಕು ಮತ್ತು ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.

ವಯೋಮಿತಿ:

ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ರಿಂದ 15 ವರ್ಷಗಳು.

ಆಯ್ಕೆ ವಿಧಾನ:

  • 2025ರ GATE ಅಂಕಗಳ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ದಾಖಲೆ ಪರಿಶೀಲನೆ
  • ಅಂತಿಮ ಆಯ್ಕೆ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ₹40,000 ರಿಂದ 1,40,000/- (ಮೂಲ ವೇತನ ₹40,000ವರೆಗೆ) ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹500
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಮಹಿಳೆಯರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

• ಅಭ್ಯರ್ಥಿಗಳು NTPC ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.

• ನಂತರ – “ಅಡ್ವಟ್ ಸಂಖ್ಯೆ-14/24 ರ ವಿರುದ್ಧ ಗೇಟ್-2025 ಮೂಲಕ EET-2025 ನೇಮಕಾತಿ” ವಿಭಾಗದ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಬಳಕೆದಾರರ ಐಡಿ ಹಾಗೂ ಇ-ಮೇಲ್ ಐಡಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಇದಾದ ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitentpc.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment