NTPC ಲಿಮಿಟೆಡ್‌ನಲ್ಲಿ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Published on:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ನಾನಾ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆಯಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗಣಿಗಾರಿಕೆ ವಿಭಾಗದಲ್ಲಿ 25 ಸ್ಥಾನಗಳು, ಸಿವಿಲ್‌ ವಿಭಾಗದಲ್ಲಿ 27 ಸ್ಥಾನಗಳಿಗೆ ನೇಮಕ ನಡೆಯಲಿದ್ದು, ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಮೇ 29ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಎನ್‌ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮೇ 15, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 29, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 29, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 65% ಅಂಕಗಳೊಂದಿಗೆ ಮೈನಿಂಗ್/ ಸಿವಿಲ್/ಕನ್ಸ್ಟ್ರಕ್ಷನ್ ಎಂಜಿನಿಯರ್ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

• ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರ(ಗಣಿಗಾರಿಕೆ) ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 27 ವರ್ಷ

• ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರ (ಸಿವಿಲ್‌) ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 30 ವರ್ಷ

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.

ಆಯ್ಕೆ ವಿಧಾನ:

  • GATE-2025 ಪರೀಕ್ಷೆಯ ಅರ್ಹತೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ದಾಖಲೆ ಪರಿಶೀಲನೆ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹40,000-₹1,40,000ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರ (ಗಣಿಗಾರಿಕೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ – ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹500
ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರ (ಸಿವಿಲ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಸಲ್ಲಿಸುವ ವಿಧಾನ

• NTPC ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ.

• ನಂತರ ನೀವು ಅರ್ಜಿ ಸಲ್ಲಿಸಬಯಸುವ ಹುದ್ದೆಯ ಜಾಹೀರಾತಿನ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಮುಂದುವರೆದಂತೆ ಬಳಕೆದಾರರ ಐಡಿ ಹಾಗೂ ಇ-ಮೇಲ್ ಐಡಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಇದಾದ ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDF (Civil)Download
Official Notification PDF (Mining)Download
Online Application Form LinkApply Now
Official Websitehttps://ntpc.co.in/
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment